Header Ads Widget

ಪ್ರವೀಣ್ ನೆಟ್ಟಾರು ನಿವಾಸಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ‌ ಭೇಟಿ : 25 ಲಕ್ಷ ರೂಪಾಯಿ ಪರಿಹಾರ ಧನ...!!

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಗೀಡಾಗಿದ್ದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ನಿವಾಸಕ್ಕೆ ಇಂದು ಸಂಜೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

ಪ್ರವೀಣ್ ಮನೆಯವರಿಗೆ ಧೈರ್ಯ ತುಂಬಿದ ಮುಖ್ಯಮಂತ್ರಿಗಳು ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲಾಗುತ್ತಿದ್ದು, ಅತೀ ಶೀಘ್ರದಲ್ಲಿ ಎಲ್ಲಾ ಆರೋಪಿಗಳನ್ನು ಬಂಧಿಸಲಾಗುವುದು.ಸರಕಾರ ಮತ್ತು ಬಿಜೆಪಿ ನಿಮ್ಮೊಂದಿಗೆ ಇರಲಿದೆ ಎಂದು ಕುಟುಂಬಸ್ಥರಿಗೆ ಧೈರ್ಯ ಹೇಳಿದ್ದಾರೆ.

ನಂತರ 25 ಲಕ್ಷ ರೂಪಾಯಿ ಪರಿಹಾರ ಧನದ ಚೆಕ್  ಮುಖ್ಯಮಂತ್ರಿಯವರು ಕುಟುಂಬಸ್ಥರಿಗೆ ನೀಡಿರುವುದಾಗಿ ಹೇಳಿಕೆ ನೀಡಿದರು.

ನಿವಾಸದ ಸುತ್ತ ವ್ಯಾಪಕ ಪೊಲೀಸ್ ಭದ್ರತೆ ಕೈಗೊಳ್ಳಲಾಗಿತ್ತು. ಸಿಎಂ ಅವರೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರಾದ ಆರಗ ಜ್ಞಾನೇಂದ್ರ, ಸುನಿಲ್ ಕುಮಾರ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಮುಂತಾದವರು ನಿವಾಸಕ್ಕೆ ಆಗಮಿಸಿದ್ದರು.

ಪ್ರವಿಣ್ ಮನೆ ಮುಂದೆ ಕುಟುಂಬಸ್ಥರು,ಬಿಜೆಪಿ ಕಾರ್ಯಕರ್ತರು ಮತ್ತು ಸಾರ್ವಜನಿಕರು ಆಗಮಿಸಿದ್ದರು.

Post a Comment

0 Comments