Header Ads Widget

ಸೋನಿಯಾ ಗಾಂಧಿಗೆ ಇ.ಡಿ ವಿಚಾರಣೆ : ಕಾಂಗ್ರೆಸ್ ಪ್ರತಿಭಟನೆ..!!



ಮಂಗಳೂರು: ಸೋನಿಯಾ ಗಾಂಧಿಗೆ ಇ.ಡಿ ವಿಚಾರಣೆ ಖಂಡಿಸಿ ಮಂಗಳೂರಿನ ಕ್ಲಾಕ್ ಟವರ್ ಬಳಿಯಿಂದ ಡಿಸಿ ಕಚೇರಿಯವರೆಗೆ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಿಥುನ್ ರೈ ನೇತೃತ್ವದ ಕಾರ್ಯಕರ್ತರ ತಂಡ ಪ್ರತಿಭಟನೆ ನಡೆಸಿದ್ದಾರೆ.

 ಪ್ರತಿಭಟನೆಯಲ್ಲಿ ಮಾಜಿ ಸಚಿವ ರಮಾನಾಥ ರೈ, ಮಾಜಿ ಶಾಸಕ ಮೊಯ್ದೀನ್ ಭಾವ, ಮಧು ಬಂಗಾರಪ್ಪ ಸೇರಿ ಹಲವರು ಭಾಗಿಯಾಗಿದ್ದರು. ಈ ವೇಳೆ ಮಾಜಿ ಸಚಿವ ರಮಾನಾಥ ರೈ ಮಾತನಾಡಿ, ಕೇಂದ್ರ ಸರಕಾರ ಪ್ರತಿಪಕ್ಷಗಳ ವಿರುದ್ಧ ರಾಜಕೀಯ ಷಡ್ಯಂತ್ರ ರೂಪಿಸಿದ್ದು ಇದು ರಾಜಕೀಯ ಸೇಡಿನ ಕ್ರಮವಾಗಿದೆ ಎಂದು ಆರೋಪಿಸಿದರು. ಪ್ರತಿಭಟನೆ ಸಂದರ್ಭ ಜಿಲ್ಲಾಧಿಕಾರಿ ಕಚೇರಿಗೆ ಜಾಥಾ ಮಾಡಲು ಮುಂದಾಗಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬ್ಯಾರಿಕೇಡ್ ಹಾಕಿ ತಡೆದು ನಿಲ್ಲಿಸಿದ್ದಾರೆ. 

ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ತಳ್ಳಾಟ ನಡೆದಿದ್ದು, ಪೊಲೀಸರು ಕೆಲ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ವಾಹನಗಳನ್ನು ತಡೆದು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಲಗಿ ಕೆಲಕಾಲದವರೆಗೆ ವಾಹನ ಸಂಚಾರವನ್ನು ತಡೆದರು. ಬಳಿಕ ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.


Post a Comment

0 Comments