Header Ads Widget

ಸುರತ್ಕಲ್ : ಯುವಕನ ಮೇಲೆ ಮಾರಕಾಯುಧಗಳಿಂದ ದಾಳಿ : ಯುವಕ‌ ಮೃತ್ಯು..!!

ಸುರತ್ಕಲ್ : ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆಯ ಬಳಿಕ ಉದ್ವಿಗ್ನ ಸ್ಥಿತಿ ನಿರ್ಮಾಣ ವಾಗಿರುವ ವೇಳೆ ಮತ್ತೆ ರಕ್ತ ಚಿಮ್ಮಿದ್ದು, ಸುರತ್ಕಲ್ ನಲ್ಲಿ ಇಂದು ರಾತ್ರಿ ಯುವಕನೊಬ್ಬನ ಮೇಲೆ ದುಷ್ಕರ್ಮಿಗಳ ತಂಡ ಮಾರಕಾಯುಧಗಳಿಂದ ದಾಳಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಹಲ್ಲೆಗೊಳಗಾಗಿ ನಂತರ ಯುವಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಮೃತಪಟ್ಟ ಯುವಕ ಮಂಗಳ ಪೇಟೆಯ ವಾಝಿ ಎಂದು ತಿಳಿಯಲಾಗಿದೆ.

ಚಪ್ಪಲಿ ಖರೀದಿಗೆ ಬಂದಿದ್ದ ವಾಝಿಯ ಮೇಲೆ ಅಂಗಡಿಯ ಎದುರಿನ ಜಗಲಿಯಲ್ಲೇ ತಲವಾರಿನಿಂದ ದಾಳಿ ನಡೆಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ತಪ್ಪಿಸಿಕೊಳ್ಳಲು ಯತ್ನಿಸಿದರು ಸಾಧ್ಯವಾಗಲಿಲ್ಲ ಎನ್ನಲಾಗಿದೆ .

ಭಾರೀ ಪ್ರಮಾಣದಲ್ಲಿ ರಕ್ತ ಸ್ರಾವ ವಾಗಿದ್ದು, ಗಂಭೀರ ಸ್ಥಿತಿಯಲ್ಲಿರುವ ವಾಝಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಗಂಭೀರ ಗಾಯಗೊಂಡ ಯುವಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು ಹೆಚ್ಚಿನ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದಾರೆ.ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

Post a Comment

0 Comments