Header Ads Widget

200 ಕೋಟಿ ರೂ. ಸುಲಿಗೆ ಪ್ರಕರಣ : ನಟಿ ನೋರಾ ಫತೇಹಿ ಅವರನ್ನು ಎಂಟು ಗಂಟೆಗಳ ಕಾಲ ವಿಚಾರಣೆ...!!

ನವದೆಹಲಿ: ಸುಕೇಶ್ ಚಂದ್ರಶೇಖರ್ ವಿರುದ್ಧ 200 ಕೋಟಿ ರೂ. ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ನೋರಾ ಫತೇಹಿ ಅವರನ್ನು ದೆಹಲಿ ಪೊಲೀಸರು ಮತ್ತೆ ವಿಚಾರಣೆ ನಡೆಸಿದ್ದಾರೆ.

ದೆಹಲಿಯ ಮಂದಿರ ಮಾರ್ಗದಲ್ಲಿರುವ ಅವರ ಕಚೇರಿಯಲ್ಲಿ ಸುಮಾರು ಎಂಟು ಗಂಟೆಗಳ ಕಾಲ ಪೊಲೀಸರು ನೋರಾ ಫತೇಹಿ ಅವರನ್ನು ಪ್ರಶ್ನಿಸಿದ್ದಾರೆ ಎಂದು ತಿಳಿದು ಬಂದಿದೆ.

ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಜಾರಿ ನಿರ್ದೇಶನಾಲಯವು ಈ ಹಿಂದೆ ಸುಕೇಶ್ ಚಂದಶೇಖರ್ ಮತ್ತು ಫತೇಹಿ ಅವರನ್ನು ಒಟ್ಟಿಗೆ ವಿಚಾರಣೆ ನಡೆಸಿತ್ತು.

Post a Comment

0 Comments