ಸಾಲದ ಹೊರೆಯಿಂದ ಬೇಸತ್ತು ವಿವಾಹಿತ ಮಹಿಳೆ ನೇಣಿಗೆ ಶರಣು..!!

 


ಮಲ್ಪೆ: ಆರ್ಥಿಕ ಸಂಕಷ್ಟದಿಂದ ಬೇಸತ್ತು ವಿವಾಹಿತ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡವೂರು ಕಾನಂಗಿ ಎಂಬಲ್ಲಿ ನಡೆದಿದೆ. ಕೊಡವೂರು ಕಾನಂಗಿಯ ನಿವಾಸಿ ಬೀನಾ ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. 

ಬೀನಾ ಅವರ ಪತಿ ಗುಂಡಿಬೈಲು ನಿವಾಸಿ ನಿತ್ಯಾನಂದ ಎಂಬವರು 9 ತಿಂಗಳ ಹಿಂದೆ ಆರ್ಥಿಕ ಸಮಸ್ಯೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ಸಾಲದ ಹೊರೆ ಬೀನಾ ಅವರ ಮೇಲೆ ಇತ್ತು. ಬೀನಾ ಅವರ ತಂದೆ ತಾಯಿ ಮಂಗಳೂರಿನ ದೇರಳಕಟ್ಟೆ ಆಸ್ಪತ್ರೆಗೆ ಕರೆದುಕೊಂಡು ಹೋಗುವವರಿದ್ದರು ಆದರೆ ಬೆಳಗ್ಗೆ ಬಂದು ನೋಡಿದಾಗ ಬೀನಾ ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ.

 ಈ ಹಿನ್ನೆಲೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


0/Post a Comment/Comments

Previous Post Next Post