ಮಣಿಪಾಲ ಸಮೂಹ ಸಂಸ್ಥೆಗಳ ಮೇಲೆ ಐಟಿ ದಾಳಿ : ಅಧಿಕಾರಿಗಳಿಂದ ದಾಖಲೆ ಪ್ರತ್ರಗಳ ಪರಿಶೀಲನೆ...!!

ಮಣಿಪಾಲ : ಐಟಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಮಣಿಪಾಲ ಸಮೂಹ ಸಂಸ್ಥೆಗಳಿಗೆ ಶಾಕ್ ನೀಡಿದ್ದಾರೆ. ಐಟಿ ಅಧಿಕಾರಿಗಳು ಏಕಕಾಲದಲ್ಲಿ ಬೆಂಗಳೂರು, ಮಣಿಪಾಲ ಸೇರಿದಂತೆ ದೇಶದ 22 ಕಡೆಗಳಲ್ಲಿ ದಾಳಿ ನಡೆಸಿದ್ದಾರೆ. 

ಉಡುಪಿ ಜಿಲ್ಲೆಯ ಮಣಿಪಾಲದಲ್ಲೂ ಮತ್ತು ಬೆಂಗಳೂರಿನಲ್ಲಿರುವ ಮಣಿಪಾಲ್‍ ಗ್ರೂಪ್‍ನ ಸಂಸ್ಥೆಯಲ್ಲಿಯೂ ಐಟಿ ಅಧಿಕಾರಿಗಳಿಂದ ಪರಿಶೀಲನೆ ನಡೆಯುತ್ತಿದೆ. ಐಟಿ ಅಧಿಕಾರಿಗಳು ಮಣಿಪಾಲ ಗ್ರೂಪ್ ನ ಪೈನಾನ್ಸ್ ವಿಭಾಗದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.

ಅಧಿಕಾರಿಗಳು ಬೆಂಗಳೂರು ಮತ್ತು ಮಂಗಳೂರಿನಿಂದ ಕಾರನ್ನು ಬಾಡಿಗೆಗೆ ಪಡೆದು ಬಂದಿದ್ದು, ದಾಖಲೆಯನ್ನು ಪರಿಶೀಲಿಸುತ್ತಿದ್ದಾರೆ.ಮ

ಣಿಪಾಲ ಹಾಗೂ ಬೆಂಗಳೂರು ಸೇರಿದಂತೆ ಇಂದು ಬೆಳಿಗ್ಗೆಯಿಂದ ಸಂಜೆ ತನಕ ಮಣಿಪಾಲ್ ಸಮೂಹ ಸಂಸ್ಥೆಗಳ ಮೇಲೆ ದಾಳಿ ನಡೆಸಿರುವ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಖಲೆ ಪತ್ರಗಳನ್ನು ಪರಿಶೀಲಿಸಿದ್ದಾರೆ ಎಂದು ತಿಳಿದು ಬಂದಿದೆ.


ಆಸ್ಪತ್ರೆ ಹಾಗೂ ಕಚೇರಿ ಸೇರಿದಂತೆ ಹಲವೆಡೆ ತೆರಿಗೆ ಅಧಿಕಾರಿಗಳಿಂದ ದಾಳಿ ನಡೆದಿದೆ.

ನಾಲ್ಕು ಇನ್ನೋವಾ ವಾಹನದಲ್ಲಿ ಆಗಮಿಸಿರುವ ಅಧಿಕಾರಿಗಳು ಹೈಗ್ರೌಂಡ್ಸ್ ಪೊಲೀಸ್ ಠಾಣೆ ಬಳಿ ಇರುವ ಮಣಿಪಾಲ್ ಆಸ್ಪತ್ರೆಗೆ ದಾಳಿ ನಡೆಸಿದ್ದಾರೆ. ಬೆಳಗಿನ ಜಾವ 6 ಗಂಟೆಯಿಂದ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

200 ಕ್ಕೂ ಹೆಚ್ಚು ಐಟಿ ಅಧಿಕಾರಿಗಳಿಂದ ಒಟ್ಟು 20 ಕಡೆಗಳಲ್ಲಿ ದಾಳಿ ನಡೆದಿದೆ ಎಂದು ತಿಳಿದು ಬಂದಿದೆ.

ಮಣಿಪಾಲ ಸಂಸ್ಥೆಯ ಮುಖ್ಯಸ್ಥರನ್ನು ವಿಚಾರಣೆ ನಡೆಸಿದ್ದಾರೆ ಮತ್ತು ದಾಖಲೆ ಪತ್ರಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.0/Post a Comment/Comments

Previous Post Next Post