Header Ads Widget

ರೂ. 2.80 ಕೋಟಿ ವೆಚ್ಚದಲ್ಲಿ ಪರಿಸರ ಸ್ನೇಹಿ ಗಾಂಧಿ ಭವನ : ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರೊಂದಿಗೆ ಶಾಸಕ ರಘುಪತಿ ಭಟ್ ಶಂಕುಸ್ಥಾಪನೆ...!!

ಉಡುಪಿ : ನಗರದ ಅಜ್ಜರಕಾಡು ಭುಜಂಗ ಪಾರ್ಕ್ ನಲ್ಲಿ ಮಕ್ಕಳಿಗಾಗಿ ನಿರ್ಮಾಣಗೊಳ್ಳುತ್ತಿರುವ  ಮ್ಯೂಸಿಯಂ "ಗಾಂಧಿ ಭವನ" ಕ್ಕೆ ಇಂದು ದಿನಾಂಕ 02-10-2022 ರಂದು ಶಂಕುಸ್ಥಾಪನೆಯನ್ನು ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರೊಂದಿಗೆ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ನೆರವೇರಿಸಿದರು.

ಈ ಮ್ಯೂಸಿಯಂ "ಗಾಂಧಿ ಭವನ"ವನ್ನು ಮಕ್ಕಳಿಗಾಗಿ ನಿರ್ಮಾಣ ಮಾಡಲಾಗುತ್ತಿದ್ದು 50 ಕಿಲೋಮೀಟರ್ ಅಂತರದ ಒಳಗೆ ಲಭ್ಯವಾಗುವ ವಸ್ತುಗಳನ್ನು (ಮೆಟೀರಿಯಲ್) ಬಳಸಿಕೊಂಡು ಯಾವುದೇ ರೀತಿಯ ರಾಸಾಯನಿಕ ವಸ್ತು (ಸಿಮೆಂಟ್ ಮತ್ತು ಸ್ಟೀಲ್) ಬಳಸದೆ ಪರಿಸರ ಸ್ನೇಹಿ ಕಟ್ಟಡ ನಿರ್ಮಿಸಲಾಗುತ್ತಿದೆ.

ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಮೈಸೂರು ಇಲೆಕ್ಟ್ರಿಕಲ್ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ಅಧ್ಯಕ್ಷರಾದ ಉದಯ ಕುಮಾರ್ ಶೆಟ್ಟಿ, ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಉಪಾಧ್ಯಕ್ಷರಾದ ಲಕ್ಷ್ಮೀ ಮಂಜುನಾಥ ಕೊಳ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ, ಸ್ಥಳೀಯ ನಗರಸಭಾ ಸದಸ್ಯರಾದ ರಶ್ಮಿ ಚಿತ್ತರಂಜನ್ ಭಟ್, ಜಿಲ್ಲಾಧಿಕಾರಿಗಳಾದ ಕೂರ್ಮಾ ರಾವ್ ಎಂ, ಪೋಲಿಸ್ ವರಿಷ್ಠಾಧಿಕಾರಿಗಳಾದ ಹಾಕೆ ಅಕ್ಷಯ್ ಮಚ್ಚಿಂದ್ರ, ನಗರಸಭೆಯ ಪೌರಾಯುಕ್ತರಾದ ಉದಯ್ ಶೆಟ್ಟಿ ಉಪಸ್ಥಿತರಿದ್ದರು.

Post a Comment

0 Comments