Header Ads Widget

ರೂ. 5.00 ಕೋಟಿ ವೆಚ್ಚದ ಉಡುಪಿ ಜಿಲ್ಲಾ ರಂಗ ಮಂದಿರಕ್ಕೆ ಸಚಿವ ಸುನಿಲ್ ಕುಮಾರ್ ಅವರೊಂದಿಗೆ ಶಾಸಕ ರಘುಪತಿ ಭಟ್ ಶಂಕುಸ್ಥಾಪನೆ...!!

ಉಡುಪಿ : ಬಹು ಬೇಡಿಕೆಯ ಉಡುಪಿ ಜಿಲ್ಲಾ ರಂಗಮಂದಿರ ನಿರ್ಮಾಣಕ್ಕೆ ದಿನಾಂಕ 02-10-2022 ರಂದು ಆದಿ ಉಡುಪಿಯಲ್ಲಿ ಶಂಕುಸ್ಥಾಪನೆ ನೆರವೇರಿತು.

ಇಂಧನ, ಕನ್ನಡ ಮತ್ತು ಸಂಸ್ಕೃತಿ  ಸಚಿವರಾದ ವಿ. ಸುನಿಲ್ ಕುಮಾರ್ ಅವರೊಂದಿಗೆ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ಅವರು ಶಂಕುಸ್ಥಾಪನೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಮೈಸೂರು ಇಲೆಕ್ಟ್ರಿಕಲ್ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ಅಧ್ಯಕ್ಷರಾದ ಉದಯ ಕುಮಾರ್ ಶೆಟ್ಟಿ, ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಉಪಾಧ್ಯಕ್ಷರಾದ ಲಕ್ಷ್ಮೀ ಮಂಜುನಾಥ ಕೊಳ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಕಲ್ಮಾಡಿ, ಉಡುಪಿ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ, ಜಿಲ್ಲಾಧಿಕಾರಿಗಳಾದ ಕೂರ್ಮಾ ರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರಸನ್ನ ಎಚ್, ಪೋಲಿಸ್ ವರಿಷ್ಠಾಧಿಕಾರಿಗಳಾದ ಹಾಕೆ ಅಕ್ಷಯ್ ಮಚ್ಚಿಂದ್ರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಪೂರ್ಣಿಮಾ ಉಪಸ್ಥಿತರಿದ್ದರು.

Post a Comment

0 Comments