Header Ads Widget

ಅರಣ್ಯ ಇಲಾಖೆ ಇಟ್ಟಿದ್ದ ಬೋನಿ‌ನಲ್ಲಿ ಚಿರತೆ ಸೆರೆ...!!!

ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ತೆಕ್ಕಟ್ಟೆ ಗ್ರಾಮಪಂಚಾಯತ್ ವ್ಯಾಪ್ತಿಯ ಮಾಲಾಡಿ ಎಂಬಲ್ಲಿನ ಶ್ರೀ ನಂದಿಕೇಶ್ವರ ದೇವಸ್ಥಾನ ಹಾಗೂ ಅಂಗನವಾಡಿ, ಶಾಲೆ ಪಕ್ಕದ ತೋಪಿನಲ್ಲಿ‌ ಅರಣ್ಯ ಇಲಾಖೆಯಿಟ್ಟ ಬೋನಿನಲ್ಲಿ ಹೆಣ್ಣು ಚಿರತೆ ಸೆರೆಯಾಗಿದೆ ಎಂದು ತಿಳಿದು ಬಂದಿದೆ.

ಇಂದು ಬೆಳಿಗ್ಗೆ ಚಿರತೆ ಸೆರೆಯಾಗಿರುವುದು ತಿಳಿದುಬಂದಿದೆ.ಹಿರಿಯ ಅರಣ್ಯಾಧಿಕಾರಿಗಳು ಘಟನೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ತೆಕ್ಕಟ್ಟೆ ಸಮೀಪದ ಮಾಲಾಡಿಯ ತೋಪಿನಿಂದ ಮುಂದೆ ಸಾಗಿದಾಗ ಸಿಗುವ ತೆಕ್ಕಟ್ಟೆ ಗ್ರಾ.ಪಂ ಅಧ್ಯಕ್ಷೆ ಮಮತಾ ದೇವಾಡಿಗರ ಪತಿ ಸುರೇಶ್ ದೇವಾಡಿಗರ ನಿವಾಸದ ತಿಂಗಳುಗಳ ಹಿಂದೆ ಪ್ರತ್ಯಕ್ಷವಾದ ಚಿರತೆ ಅವರ ಮನೆ ಸಾಕು ನಾಯಿಯನ್ನು ಹೊತ್ತೊಯ್ದಿತ್ತು. ಈ ಬಗ್ಗೆ ಮನೆಯವರಾದ ಸತೀಶ್ ದೇವಾಡಿಗ ಅರಣ್ಯ ಇಲಾಖೆ ಗಮನಕ್ಕೆ ತಂದಿದ್ದು ನಿರಂತರ ಈ ಭಾಗದಲ್ಲಿ ಚಿರತೆ ಕಾಟವಿದ್ದರಿಂದ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದು ಇಲಾಖೆ ಬೋನ್ ಇಟ್ಟು ಚಿರತೆ ಹಿಡಿಯುವ ಕಾರ್ಯಾಚರಣೆ ನಡೆಸಲು ಮುಂದಾಗಿತ್ತು. ತಿಂಗಳುಗಳಿಂದ ಚಿರತೆ ಪ್ರತ್ಯಕ್ಷವಾದ ತೋಪಿನಲ್ಲಿ ಬೋನು ಇಡಲಾಗಿದ್ದು ಅಂದಾಜು 4-5 ವರ್ಷ ಪ್ರಾಯದ ಹೆಣ್ಣು ಚಿರತೆ ಸೆರೆಯಾಗಿದೆ ಎಂದು ಮಾಹಿತಿ ತಿಳಿಯಲಾಗಿದೆ.

ಕುಂದಾಪುರ ವಲಯ ಅರಣ್ಯಾಧಿಕಾರಿ ಕಿರಣ್ ಬಾಬು, ಉಪವಲಯ ಅರಣ್ಯಾಧಿಕಾರಿ ಉದಯ್, ಅರಣ್ಯ ರಕ್ಷಕರಾದ ರಂಜಿತ್, ಮಾಲತಿ, ಅರಣ್ಯ ವೀಕ್ಷಕ ಸೋಮಶೇಖರ್, ಚಾಲಕ ಅಶೋಕ್, ಸ್ಥಳೀಯ ಪ್ರಮುಖರಾದ ಮಲ್ಯಾಡಿ ಶಿವರಾಮ ಶೆಟ್ಟಿ, ಸುರೇಶ್ ದೇವಾಡಿಗ, ಸತೀಶ್ ದೇವಾಡಿಗ, ತೆಕ್ಕಟ್ಟೆ ಗ್ರಾ.ಪಂ ಅಧ್ಯಕ್ಷೆ ಮಮತಾ ದೇವಾಡಿಗ, ಉಪಾಧ್ಯಕ್ಷ ಸಂಜೀವ ದೇವಾಡಿಗ, ಪಿಡಿಓ ಸುನೀಲ್ ಕುಮಾರ್, ಸದಸ್ಯ ವಿಜಯ ಭಂಡಾರಿ,ಉಪಸ್ಥಿತರಿದ್ದರು.

Post a Comment

0 Comments