Header Ads Widget

Whats-App-Image-2024-05-08-at-4-44-56-PM-4

ಮನೆಗೆ ಬೆಂಕಿ ಹೊತ್ತಿಕೊಂಡು ಒಂದೇ ಕುಟುಂಬದ ಐದು ಮಂದಿ ಸಜೀವ ದಹನ..!!


ಉತ್ತರ ಪ್ರದೇಶ :
ಉತ್ತರ ಪ್ರದೇಶದ ಮವೂ ಜಿಲ್ಲೆಯ ಶಹಾಪುರ ಗ್ರಾಮದಲ್ಲಿ ಮನೆಯೊಂದರಲ್ಲಿ ಸಂಭವಿಸಿದ ಅಗ್ನಿ ಅನಾಹುತಕ್ಕೆ ಒಂದೇ ಕುಟುಂಬದ ಐದು ಮಂದಿ ಮೃತಪಟ್ಟ ಘಟನೆ ನಡೆದಿದೆ.

ಸ್ಟೌ ನಿಂದ ಬೆಂಕಿ ಹೊತ್ತಿಕೊಂಡಿರುವ ಬಗ್ಗೆ ಪ್ರಾಥಮಿಕ ವರದಿಯಲ್ಲಿ ತಿಳಿದು ಬಂದಿದೆ.ಬೆಂಕಿ ಇಡೀ ಮನೆಗೆ ವ್ಯಾಪಿಸಿದ್ದು, ಇದರಿಂದ ಮನೆಯೊಳಗಿದ್ದ ಮಹಿಳೆ, ಪುರುಷ, 3 ಅಪ್ರಾಪ್ತ ವಯಸ್ಸಿನ ಮಕ್ಕಳು ಸಾವನ್ನಪ್ಪಿದ್ದಾರೆ.

ಈ ಘಟನೆ ಕೋಪಗಂಜ್ ಠಾಣಾ ವ್ಯಾಪ್ತಿಯಲ್ಲಿ  ನಡೆದಿದ್ದು, ಘಟನೆಯ ಬಗ್ಗೆ ಮಾಹಿತಿ ಪಡೆದ ಕೂಡಲೇ ಪೊಲೀಸರು, ಅಗ್ನಿಶಾಮಕ ಮತ್ತು ವೈದ್ಯಕೀಯ ತಂಡಗಳು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.

ಮೃತಪಟ್ಟವರ ಸಂಬಂಧಿಕರಿಗೆ ತಲಾ 4 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಉತ್ತರ ಪ್ರದೇಶ ಸರ್ಕಾರ ಘೋಷಿಸಿದೆ.


Post a Comment

0 Comments