Header Ads Widget

Whats-App-Image-2024-05-08-at-4-44-56-PM-4

ಫಾರ್ಮಾ ಫ್ಯಾಕ್ಟರಿಯಲ್ಲಿ ಭಾರೀ ಸ್ಫೋಟ ಸಂಭವಿಸಿ ಕಾರ್ಮಿಕನೊಬ್ಬ, ಮೂವರು ಗಂಭೀರ ಗಾಯ..!!


ಆಂಧ್ರಪ್ರದೇಶ: 
ಆಂಧ್ರಪ್ರದೇಶದ ಅನಕಾಪಲ್ಲಿ ಜಿಲ್ಲೆಯ ಅಚ್ಯುತಪುರಂ ವಿಶೇಷ ಆರ್ಥಿಕ ವಲಯದಲ್ಲಿ  ಜಿಎಫ್‌ಎಂಎಸ್ ಫಾರ್ಮಾ ಫ್ಯಾಕ್ಟರಿಯಲ್ಲಿ ಭಾರೀ ಸ್ಫೋಟ ಸಂಭವಿಸಿ ಕಾರ್ಮಿಕನೊಬ್ಬ ಸಾವನ್ನಪ್ಪಿ,ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಜಿಎಫ್‌ಎಂಎಸ್ ಫಾರ್ಮಾ ಫ್ಯಾಕ್ಟರಿಯಲ್ಲಿ ಇಂದು ಭಾರೀ ಸ್ಪೋಟ ಸಂಭವಿಸಿದೆ. ಸ್ಪೋಟದಿಂದಾಗಿ ಓರ್ವ ಕಾರ್ಮಿಕ ಸಾವನ್ನಪ್ಪಿದ್ದಾನೆ. ಗಾಯಾಳುಗಳಾದ ಮೂವರನ್ನು ಕೂಡಲೇ ಸನಿಹದ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿದೆ.

ಸ್ಪೋಟಕ್ಕೆ ಕಾರಣವೇನೆಂದು ತಿಳಿದು ಬಂದಿಲ್ಲ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಎಲಮಂಚಿಲಿ ಸರ್ಕಲ್ ಇನ್ಸ್‌ಪೆಕ್ಟರ್ ಗಫೂರ್ ಶೇಖ್ ಮಾಹಿತಿ ನೀಡಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.


Post a Comment

0 Comments