Header Ads Widget

Whats-App-Image-2024-05-08-at-4-44-56-PM-4

ಲಕ್ನೋ ಜೈಲಿನಿಂದ ಕೇರಳದ ಪತ್ರಕರ್ತ ಸಿದ್ದೀಕ್ ಕಪ್ಪನ್ ಕೊನೆಗೂ ಎರಡು ವರ್ಷಗಳ ಬಳಿಕ ಬಿಡುಗಡೆ..!!


ಲಕ್ನೋ:
ಉತ್ತರಪ್ರದೇಶದ ಲಕ್ನೋ ಜೈಲಿನಿಂದ ಗುರುವಾರ ಬೆಳಗ್ಗೆ  ಕೇರಳದ ಪತ್ರಕರ್ತ ಸಿದ್ದೀಕ್ ಕಪ್ಪನ್ ಕೊನೆಗೂ ಎರಡು ವರ್ಷಗಳ ಬಳಿಕ ಬಿಡುಗಡೆಯಾದರು.

ಉತ್ತರ ಪ್ರದೇಶದಲ್ಲಿ ಎರಡು ವರ್ಷಗಳ ಹಿಂದೆ 20 ವರ್ಷದ ದಲಿತ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರದ ಹಾಗೂ ಸಾವಿನ ಕುರಿತು ವರದಿ ಮಾಡಾಲು ಹತ್ರಾಸ್ ಗೆ ಹೋಗುತ್ತಿದ್ದಾಗ ಪತ್ರಕರ್ತ ಕಪ್ಪನ್ ಅವರನ್ನು ಬಂಧಿಸಲಾಗಿತ್ತು.

"ಕಠಿಣ ಕಾನೂನುಗಳ ವಿರುದ್ಧ ನನ್ನ ಹೋರಾಟವನ್ನು ಮುಂದುವರಿಸುತ್ತೇನೆ. ಜಾಮೀನು ಸಿಕ್ಕ ನಂತರವೂ ಅವರು ನನ್ನನ್ನು ಜೈಲಿನಲ್ಲಿಟ್ಟರು ನಾನು ಜೈಲಿನಲ್ಲಿರುವುದರಿಂದ ಯಾರಿಗೆ ಲಾಭವಾಗಿದೆ ಎಂದು ನನಗೆ ತಿಳಿದಿಲ್ಲ. ಈ ಎರಡು ವರ್ಷಗಳು ತುಂಬಾ ಕಠಿಣವಾಗಿತ್ತು. ಆದರೆ ನಾನು ಎಂದಿಗೂ ಹೆದರಲಿಲ್ಲ, ”ಎಂದು ಅವರು ಲಕ್ನೋ ಜೈಲಿನಿಂದ ಬಿಡುಗಡೆಯಾದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಮಾತನಾಡಿದರು.

ಅವರ ವಿರುದ್ಧದ ಎರಡು ಪ್ರಕರಣಗಳಲ್ಲಿ ಜಾಮೀನು ಪಡೆದ ನಂತರ ಅವರು ಒಂದು ತಿಂಗಳಿನಿಂದ ಜೈಲಿನಲ್ಲಿದ್ದರು.ಕಪ್ಪನ್ ಅವರು ನಿನ್ನೆ ಸಂಜೆಯೇ ಬಿಡುಗಡೆಯಾಗುತ್ತಾರೆ ಎಂದು ನಿರೀಕ್ಷಿಸಲಾಗಿತ್ತು, ಆದರೆ ಅಕ್ರಮ ಹಣ ವರ್ಗಾವಣೆ ಪ್ರಕರಣಗಳ ವಿಚಾರಣೆ ನಡೆಸುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಬಾರ್ ಕೌನ್ಸಿಲ್ ಚುನಾವಣೆಯಲ್ಲಿ ನಿರತರಾಗಿದ್ದರಿಂದ ಅವರನ್ನು ಬಿಡುಗಡೆ ಮಾಡಲು ಸಾಧ್ಯವಾಗಲಿಲ್ಲ.

Post a Comment

0 Comments