Header Ads Widget

ಈ ದೇವರಿಗೆ “ಮಂಚ್” ಚಾಕೋಲೇಟ್ ಅತ್ಯಂತ ಪ್ರಿಯವಾದ ಹರಕೆ..!!


ಕೇರಳ:
ಕೇರಳದ ಅಳಪ್ಪುಳದ ಬಾಲಮುರುಗನ್ ದೇವರಿಗೆ “ಮಂಚ್” ಚಾಕೋಲೇಟ್ ಅತ್ಯಂತ ಪ್ರಿಯವಾದ ಹರಕೆಯಾಗಿದೆ.

ಕೇರಳದ ಅಳಪ್ಪುಳದ ಚೆಮ್ಮೋತ್ ನ ಶ್ರೀಸುಬ್ರಹ್ಮಣ್ಯ ಸ್ವಾಮಿ ದೇವಾಲಯವೇ ಕಳೆದ ಆರು ವರ್ಷಗಳಿಂದ “ಮಂಚ್ ಮುರುಗನ್” ದೇವಾಲಯ ಎಂದೇ ಜನಪ್ರಿಯಗೊಂಡಿದೆ. ಚೆಮ್ಮೋತ್ ನ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕೆಲವು ವರ್ಷಗಳ ಹಿಂದೆ ಪುಟ್ಟ ಬಾಲಕನೊಬ್ಬ ಮಂಚ್ ಚಾಕೊಲೇಟ್ ಅನ್ನು ಬಾಲಮುರುಗನ್ ದೇವರಿಗೆ ಅರ್ಪಿಸಿದ ನಂತರ ಅದನ್ನು ಇಷ್ಟಪಟ್ಟಿದ್ದಾನೆ ಎಂಬುದನ್ನು ಗ್ರಹಿಸಲಾಗಿತ್ತು.

ಚೆಮ್ಮೋತ್ ನ ಶ್ರೀಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಮೊದಲು ಹಣ್ಣು, ಕಾಯಿ-ಹಂಪಲು, ದ್ರಾಕ್ಷಿ, ಗೋಡಂಬಿ ಸೇರಿದಂತೆ ಇನ್ನಿತರ ನೈವೇದ್ಯ ಅರ್ಪಿಸುತ್ತಿದ್ದರಂತೆ. ಆದರೆ ದೇವಾಲಯದ ಆಡಳಿತ ನಡೆಸುತ್ತಿರುವ ಅನೂಪ್ ಎ.ಚೆಮ್ಮೋತ್ ಅವರ ಹೇಳಿಕೆಯ ಪ್ರಕಾರ, ಕಳೆದ ಆರು ವರ್ಷಗಳ ಹಿಂದೆ ನಡೆದ ಒಂದು ಘಟನೆಯಿಂದ. ಈ ಮಂಚ್ ಮುರುಗನ್ ಹೆಸರು ಹೆಚ್ಚು ಜನಪ್ರಿಯತೆ ಪಡೆದುಕೊಂಡಿದೆ ಎಂದು ಹೇಳುತ್ತಾರೆ.

ಸುಮಾರು ಆರು ವರ್ಷಗಳ ಹಿಂದೆ ಮುಸ್ಲಿಮ್ ಬಾಲಕನೊಬ್ಬ ಆಟವಾಡುತ್ತಿದ್ದಾಗ, ಒಂದು ಬಾರಿ ದೇವಾಲಯದ ಗಂಟೆಯನ್ನು ಬಾರಿಸಿದ್ದ. ಆದರೆ ಆತನ ಪೋಷಕರು ಬಾಲಕನನ್ನು ತರಾಟೆಗೆ ತೆಗೆದುಕೊಂಡಿದ್ದರಂತೆ. ಕಾಕತಾಳೀಯ ಎಂಬಂತೆ ಆದೇ ದಿನ ರಾತ್ರಿ ಬಾಲಕನಿಗೆ ಅನಾರೋಗ್ಯ ಕಾಣಿಸಿಕೊಂಡು, ರಾತ್ರಿಯಿಡಿ ನಿದ್ದೆಯಲ್ಲಿ ಮುರುಗನ್ ಹೆಸರನ್ನು ಕನವರಿಸುತ್ತಿದ್ದ. ಮರುದಿನ ಆತನನ್ನು ಪೋಷಕರು ಬಾಲಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕರೆದುಕೊಂಡು ಬಂದು, ಅರ್ಚಕರ ಬಳಿ ವಿಷಯ ತಿಳಿಸಿದಾಗ, ದೇವರಿಗೆ ಏನಾದರು ಹರಕೆ ಕೊಡುವಂತೆ ಹೇಳಿದ್ದರು. ಆಗ ಪೋಷಕರು ಎಳ್ಳೆಣ್ಣೆ ಮತ್ತು ಹೂವು ಅರ್ಪಿಸುವುದಾಗಿ ತಿಳಿಸಿದ್ದು, ಅದಕ್ಕೆ ಬಾಲಕ ತನ್ನಲ್ಲಿದ್ದ ಮಂಚ್ ಚಾಕೋಲೇಟ್ ಅರ್ಪಿಸುವುದಾಗಿ ಹಠ ಹಿಡಿದುಬಿಟ್ಟಿದ್ದನಂತೆ.

Post a Comment

0 Comments