Header Ads Widget

Whats-App-Image-2024-05-08-at-4-44-56-PM-4

ಉಪ್ಪುಂದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಸೃಜನ -02 ವಿಜೃಂಭಣೆಯಿಂದ ನಡೆಯಿತು..!!


ಬೈಂದೂರು: ಯು.ಬಿ.ಎಸ್  ಸಮೂಹ ಶಿಕ್ಷಣ ಸಂಸ್ಥೆಗಳ, ಶ್ರೀ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಉಪ್ಪುಂದ ಇದರ ವಾರ್ಷಿಕೋತ್ಸವ "ಸೃಜನ 02" ಕಾರ್ಯಕ್ರಮ ಶಾಲೆಯ ಸಭಾಂಗಣದಲ್ಲಿ ನಡೆಯಿತು. 

ಭವ್ಯಮೆರವಣಿಗೆ ಮೂಲಕ ಗಣ್ಯರನ್ನು ವೇದಿಕೆಗೆ ಕರೆ ತರಲಾಯಿತು.

ಯು.ಬಿ. ಶೆಟ್ಟಿ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಶ್ರೀ ಯು.ಬಿ. ಶೆಟ್ಟಿ ಯವರು ಅಧ್ಯಕ್ಷತೆ ವಹಿಸಿ, ವಾರ್ಷಿಕೋತ್ಸವ ಸೃಜನ 02 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,ಜನ್ಮಭೂಮಿಗೆ ಒಂದು ಶಾಶ್ವತ ಕೊಡುಗೆ ನೀಡಬೇಕು ಎನ್ನುವ ಉದ್ದೇಶದಿಂದ ಮತ್ತು ಗ್ರಾಮೀಣ ಭಾಗದ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದೆಂಬ ನೆಲೆಯಲ್ಲಿ ಮೂರು ವರ್ಷದ ಹಿಂದೆ ಎರಡು ಶಿಕ್ಷಣ ಸಂಸ್ಥೆಗಳನ್ನು ಸುಪರ್ದಿಗೆ ಪಡೆದಿದ್ದು, ಪ್ರಸ್ತುತ ಸಂಸ್ಥೆಗಳ ಕಾರ್ಯವೈಖರಿಗಳ ಬಗ್ಗೆ ನನಗೆ ಸಂತೃಪ್ತಿಯಿದೆ ಎಂದು ಹೇಳಿದರು.

ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕಳೆದ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕರಾದ ಸವಿತ್ರ ತೇಜ್ ಮಾತನಾಡಿ, ಯು.ಬಿ ಶೆಟ್ಟಿ ಅವರು ಸರಕಾರಿ ಶಾಲೆಯನ್ನು ದತ್ತು ಪಡೆದು ಆ ಶಾಲೆಯನ್ನು ಅಭಿವೃದ್ಧಿ ಮಾಡುವುದರ ಮೂಲಕ ಶೈಕ್ಷಣಿಕ ಕ್ಷೇತ್ರದಲ್ಲಿ ಅವರ ಸೇವೆ ಅಮೂಲ್ಯವಾದದ್ದು ಎಂದು ಹೇಳಿದರು.ಟ್ರಸ್ಟಿಗಳಾದ ಶ್ರೀಮತಿ ರಂಜನಾ ಯು.ಬಿ ಶೆಟ್ಟಿ ಶಾಲೆಯ ಸೃಜನ 02 ಹಸ್ತ ಪತ್ರಿಕೆ ಬಿಡುಗಡೆಗೊಳಿಸಿದರು.


ಶಾಲಾ ಮುಖ್ಯೋಪಾಧ್ಯಾಯಿನಿ ಶೋಭಾ ಸವಿತಾ ಡಿ ಅಲ್ಮೇಡಾ ವಾರ್ಷಿಕ ವರದಿ ವಾಚಿಸಿದರು.

ಶೈಕ್ಷಣಿಕ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಕ್ರೀಡಾ ಕ್ಷೇತ್ರದ ಚಾಂಪಿಯನ್ ಗಳಿಗೆ ಪ್ರಶಸ್ತಿ ಪತ್ರ ಬಹುಮಾನ ವಿತರಿಸಲಾಯಿತು.

ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ನಾಗೇಶ್ ನಾಯ್ಕ್ ಮಾತನಾಡಿ ಯು.ಬಿ ಶೆಟ್ಟಿ ಅವರು ಶೈಕ್ಷಣಿಕ, ಧಾರ್ಮಿಕ, ಸಾಮಾಜಿಕ ಕ್ಷೇತ್ರದಲ್ಲಿ ತನ್ನದೇ ಸೇವೆಯನ್ನು    

ಸಲ್ಲಿಸುತ್ತಾ ಬರುತ್ತಿದ್ದಾರೆ ಎಂದು ಹೇಳಿದರು.ಸಂಸ್ಥೆಯ ಸಿಬ್ಬಂದಿ ವತಿಯಿಂದ ಯು. ಬಿ. ಶೆಟ್ಟಿ ದಂಪತಿಗಳಿಗೆ ಸನ್ಮಾನಿಸಿ, ಗೌರವಿಸಲಾಯಿತು.

ಸಂಸ್ಥೆ ವತಿಯಿಂದಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ನಾಗೇಶ ನಾಯ್ಕ್ ಮತ್ತು ಬೈಂದೂರು ವೃತ್ತ ನಿರೀಕ್ಷಕರಾದ ಶ್ರೀ ಸವಿತ್ರ ತೇಜ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ವಿದ್ಯಾರ್ಥಿ ನಾಯಕ ಕು.ವಿಖ್ಯಾತ್ , ಶಿಕ್ಷಕ ವೃಂದ, ಮಕ್ಕಳ ಪೋಷಕರು ಹಾಗೂ ಶಿಕ್ಷಣ ಅಭಿಮಾನಿಗಳು ಉಪಸ್ಥಿತರಿದ್ದರು.ಶಿಕ್ಷಣ ಸಂಯೋಜಕರಾದ ಶ್ರೀ ಸುಬ್ರಹ್ಮಣ್ಯ ಜೋಶಿ ಸ್ವಾಗತಿಸಿದರು.  ವಿದ್ಯಾರ್ಥಿನಿ ಕು.ಶ್ರೀನಿಧಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ನಾಯಕಿ ಕು.ಅದಿತಿ ವಂದಿಸಿದರು.

Post a Comment

0 Comments