Header Ads Widget

ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್ ಗಳ ಸ್ಥಾಪನೆ : ಮುಖ್ಯಮಂತ್ರಿ ಸಿದ್ದರಾಮಯ್ಯ..!!


ಬೆಂಗಳೂರು: ಡಿ.01: ಪ್ರೈಮ್ ಟಿವಿ ನ್ಯೂಸ್ : ಜನರ ಅನುಕೂಲಕ್ಕಾಗಿ ಈ ವರ್ಷ ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್ ಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಶಾಸಕರ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು ಅವರು, ಇಂದಿರಾ ಕ್ಯಾಂಟೀನ್ ಸಮರ್ಪಕವಾಗಿ ನಡೆಯುತ್ತಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿ, ಬೆಂಗಳೂರಿನ 225 ವಾರ್ಡ್ ಗಳಲ್ಲಿಯೂ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲಾಗುವುದು. ಕ್ಯಾಂಟೀನ್ ಗೆ ಸ್ಥಳದ ಅಭಾವವಿರುವ ಕಡೆ ಮೊಬೈಲ್ ಕ್ಯಾಂಟೀನ್ ಗಳನ್ನು ಸ್ಥಾಪಿಸಲಾಗುವುದು ಎಂದರು.

Post a Comment

0 Comments