Header Ads Widget

Whats-App-Image-2024-05-08-at-4-44-56-PM-4

ಉಡುಪಿ : ವಿಕಸಿತ ಭಾರತ ಸಂಕಲ್ಪ ಯಾತ್ರೆ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಚಾಲನೆ..!!


ಉಡುಪಿ : ಡಿ. 01: ಪ್ರೈಮ್ ಟಿವಿ ನ್ಯೂಸ್ : ಭಾರತದಾದ್ಯಂತ ನವೆಂಬರ್ 15ರಿಂದ ಜನವರಿ 26ರವರೆಗೆ ನಡೆಯುತ್ತಿರುವ "ವಿಕಸಿತ ಭಾರತ ಸಂಕಲ್ಪ ಯಾತ್ರೆ"ಗೆ  ಅಂಬಲಪಾಡಿ ಗ್ರಾಮ ಪಂಚಾಯತ್ ಬಳಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಚಾಲನೆ ನೀಡಿದರು.

ಇದೇ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಭಾಷಣದ ನೇರಪ್ರಸಾರ ವೀಕ್ಷಿಸಲಾಯಿತು.ಕೇಂದ್ರ ಸರ್ಕಾರದ 70ಕ್ಕೂ ಹೆಚ್ಚು ಯೋಜನೆಗಳ ಪೈಕಿ 17 ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿಯನ್ನು ಒದಗಿಸುವುದು, ಈ ಯೋಜನೆಗಳನ್ನು ಕೊನೆಯ ಮೈಲಿಯವರೆಗೂ ಮುಟ್ಟಿಸುವುದು, ಈವರೆಗೆ ಪ್ರಯೋಜನ ಪಡೆಯದ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಯೋಜನೆಗಳನ್ನು ತಲುಪಿಸುವುದು ಈ ಯಾತ್ರೆಯ ಉದ್ದೇಶವಾಗಿದ್ದು, ಯಾತ್ರೆಯಲ್ಲಿ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ವಾಹನ ಉಡುಪಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸಲಿದ್ದು, ಎಲ್ಇಡಿ ಪರದೆಯ ಮೂಲಕ  ಯೋಜನೆಗಳ ಮಾಹಿತಿಯನ್ನು ನೀಡಲಾಗುವುದು.


ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ, ಕೆನರಾ ಬ್ಯಾಂಕ್ ಮಣಿಪಾಲ ಶಾಖೆಯ ಮಹಾ ಪ್ರಬಂಧಕರಾದ ಪಂಡಿತ್ ಹಾಗೂ ಅಂಬಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರು ಸದಸ್ಯರು ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.



Post a Comment

0 Comments