Header Ads Widget

Whats-App-Image-2024-05-08-at-4-44-56-PM-4

ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಹಕ್ಲಾಡಿ ವಾರ್ಷಿಕೋತ್ಸವ..!!


ಬೈಂದೂರು: ಕುಂದಾಪುರ ತಾಲೂಕಿನ ಬೈಂದೂರು ವಲಯದ ಮಾದರಿ ಸರಕಾರಿ ಹಿರಿಯ ಪ್ರಾಥಮಿಕ ಹಕ್ಲಾಡಿ ಶಾಲೆಯಲ್ಲಿ 121ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಬುಧವಾರ ಅದ್ದೂರಿಯಾಗಿ ನಡೆಯಿತು.

ಸಾಂಸ್ಕ್ರತಿಕ ವೈಭವ ಕಾರ್ಯಕ್ರಮದ ಅಂಗವಾಗಿ ಅಂಗನವಾಡಿ ವಿದ್ಯಾರ್ಥಿಗಳಿಂದ ನೃತ್ಯ ಕಾರ್ಯಕ್ರಮ,ಶಾಲಾ ವಿದ್ಯಾರ್ಥಿಗಳಿಂದ ನೃತ್ಯ ಸಿಂಚನ ಕಾರ್ಯಕ್ರಮ ಹಾಗೂ ಚೆಲುವೆ ಚಿತ್ರ ನಯನೆ ಎಂಬ ಯಕ್ಷಗಾನ ಪ್ರದರ್ಶನ ಜರುಗಿತು.ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದ ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಹಳೆ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಹಕ್ಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪ್ರೇಮಾ ದೇವಾಡಿಗ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಬೈಂದೂರು ಕ್ಷೇತ್ರದ ಗುರುರಾಜ್ ಗಂಟಿಹೊಳೆ‌ ಅವರು ಮಾತನಾಡಿ,ಕೃಷಿ ಕೂಲಿ ಕಾರ್ಮಿಕರು, ಅಶಕ್ತರು,ಬಡವರ ಮಕ್ಕಳಿಗೆ ವಿದ್ಯಾರ್ಜನೆ ಮಾಡುತ್ತಿರುವ ಸರಕಾರಿ ಶಾಲೆಗಳ ಗುಣಮಟ್ಟ ಸುಧಾರಣೆಗೆ ಸರ್ಕಾರ ಇನ್ನಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕಾದ ಅವಶ್ಯಕತೆ ಇದೆ.ಹಕ್ಲಾಡಿ ಸರ್ಕಾರಿ ಶಾಲೆಗೆ ಮಕ್ಕಳ ಆಟೋಟ ಚಟುವಟಿಕೆಗೆ ಮೈದಾನ ಕೊರತೆ ಇದೆ,ಶಾಲೆಗೆ ಸಂಬಂಧಿಸಿದ ಸುಮಾರು 40 ಸೆಂಟ್ಸ್ ಜಾಗವನ್ನು ಸಮತಟ್ಟು ಮಾಡಿ ಮಕ್ಕಳ ಅನುಕೂಲಕ್ಕೆ ತಕ್ಕಂತೆ ಮೈದಾನ ನಿರ್ಮಾಣ ಮಾಡಬೇಕಾದ ಅಗತ್ಯವಿದ್ದು,ವಿದ್ಯಾಭಿಮಾನಿಗಳು, ಗ್ರಾಮಸ್ಥರು ಕೈಜೋಡಿಸಬೇಕು ಎಂದು ಕೇಳಿಕೊಂಡರು.ಶಾಲೆಯ ಅಭಿವೃದ್ಧಿಗೆ ಕೈಜೋಡಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.


ಬೈಂದೂರು ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ್ ಮಾತನಾಡಿ,
ಅತ್ಯಂತ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿರುವ ಹಕ್ಲಾಡಿ ಶಾಲೆ ಮಾದರಿ ಶಾಲೆಗಳಲ್ಲಿ ಒಂದಾಗಿದೆ.ಶಾಲೆಗೆ ಅಗತ್ಯವಾಗಿ ಬೇಕಾಗಿರುವ ಡೆಸ್ಕ್,ಕಂಪ್ಯೂಟರ್ ಲ್ಯಾಪ್ ಒದಗಿಸಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.121 ಇತಿಹಾಸ ಹೊಂದಿರುವ ಶಾಲೆಯಲ್ಲಿ ನೂರಾರು ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿರುವುದು ಶಾಲೆಯ ಕಾರ್ಯವೈಖರಿಗೆ ಹಿಡಿದ ಕೈಗನ್ನಡಿ ಆಗಿದೆ ಎಂದರು.ಕೇವಲ ಶಿಕ್ಷಣವನ್ನು ಪಡೆಯದೆ ಶಾಲಾ ಅಭಿವೃದ್ಧಿಗೆ ಕೊಡುಗೆ ನೀಡುತ್ತಿರುವ ಹಳೆ ವಿದ್ಯಾರ್ಥಿಗಳ ಕೊಡುಗೆ ಅಪಾರವಾದದ್ದು ಎಂದು ಹೇಳಿದರು.

ಶಾಲಾ ಮುಖ್ಯೋಪಾಧ್ಯಾಯಿನಿ ಗೀತಾ ಬಿ ಮಾತನಾಡಿ ಶಾಲೆಯಲ್ಲಿ ಜರುಗಿದ 121ನೇ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಸಹಕರಿಸಿದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯರಿಗೆ, ದಾನಿಗಳಿಗೆ, ಲಯನ್ಸ್ ಕ್ಲಬ್ ಹಕ್ಲಾಡಿ, ಗ್ರಾಮಸ್ಥರಿಗೆ, ಗ್ರಾಮ ಪಂಚಾಯತ್ ಹಕ್ಲಾಡಿಗೆ, ಜನಪ್ರತಿನಿಧಿಗಳಿಗೆ ಧನ್ಯವಾದಗಳನ್ನು ಅರ್ಪಿಸಿದರು.

ಹಕ್ಲಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸುಭಾಷ್ ಶೆಟ್ಟಿ ಹೊಳ್ಮಗೆ, ಹೆಮ್ಮಾಡಿ ಪಂಚಾಂಗ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಪ್ರಥಮ ದರ್ಜೆ ಗುತ್ತಿಗೆದಾರರಾದ ರಾಜೀವ ಶೆಟ್ಟಿ ಹಕ್ಲಾಡಿ, ಲಯನ್ಸ್ ಕ್ಲಬ್ ಹಕ್ಲಾಡಿ ಅಧ್ಯಕ್ಷ ಗಣಪಯ್ಯ ಶೆಟ್ಟಿ ಮಾತನಾಡಿ ಶುಭಾಶಯ ಕೋರಿದರು.

ಹಕ್ಲಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಚೇತನ್ ಮೊಗವೀರ, ಗ್ರಾಮ ಮಟ್ಟದ ಎಸ್ ಡಿ ಎಂ ಸಿ ಸಮನ್ವಯ ವೇದಿಕೆ ಅಧ್ಯಕ್ಷ ಚಂದ್ರಹಾಸ, ಗ್ರಾಮ ಪಂಚಾಯತ್ ಸದಸ್ಯೆ ಶಾರದ, ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಮಾಜಿ ಅಧ್ಯಕ್ಷರಾದ ಸತೀಶ್ ಕುಮಾರ್ ಶೆಟ್ಟಿ, ನಾಗೇಶ್ ಪೂಜಾರಿ,ಕೆ.ಎಸ್.ಎಸ್ ಸರ್ಕಾರಿ ಪ್ರೌಢಶಾಲೆ ಹಕ್ಲಾಡಿ ಮುಖ್ಯ ಶಿಕ್ಷಕ ಮಂಜುನಾಥ್ ಶೇರಿಗಾರ್, ಎಸ್ ಡಿ ಎಂ ಸಿ ಅಧ್ಯಕ್ಷ ಅಯೂಬ್ ಮಾಣಿಕೊಳಲು ಮತ್ತು ಉಪಾಧ್ಯಕ್ಷೆ ಶಾಂತ, ಶಾಲಾ ವಿದ್ಯಾರ್ಥಿ ನಾಯಕಿ ಭೂಮಿಕಾ,ಎಸ್ ಡಿ ಎಂ ಸಿ ಸದಸ್ಯರಾದ ಇಬ್ರಾಹಿಂ, ಚಂದ್ರ, ಅಶ್ರಫ್,ಉದಯ ಮಡಿವಾಳ,ರತ್ನ,ಉದಯ, ಶಶಿಕಲಾ, ಸುಪ್ರೀತಾ, ರಾಮ ದೇವಾಡಿಗ, ಪ್ರೀತಿ, ರಾಜೀವ ಪೂಜಾರಿ, ವಿದ್ಯಾ ಆಚಾರ್ಯ, ಮಮತಾ, ಗೀತಾ, ಸತ್ಯವತಿ ,ಅಧ್ಯಾಪಕ ವೃಂದದವರು, ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮಾದರಿ ಸರಕಾರಿ ಹಿರಿಯ ಪ್ರಾಥಮಿಕ ಹಕ್ಲಾಡಿ ಶಾಲೆಯ ಅಭಿವೃದ್ಧಿಗೆ ಲಯನ್ಸ್ ಕ್ಲಬ್ ಹಕ್ಲಾಡಿ ವತಿಯಿಂದ 75,000.ರೂ ಧನಸಹಾಯವನ್ನು ನೀಡಿದರು.

ಎಸ್ ಡಿ ಎಂ ಸಿ ಸದಸ್ಯ ಸುರೇಶ್ ಹಕ್ಲಾಡಿ ಸ್ವಾಗತಿಸಿದರು.ಶಾಲಾ ಮುಖ್ಯೋಪಾಧ್ಯಾಯಿನಿ ಗೀತಾ ಬಿ ವಾರ್ಷಿಕ ವರದಿ ವಾಚಿಸಿದರು.ಸಹ ಶಿಕ್ಷಕರಾದ ಶ್ಯಾಮಲಾ, ಶಿವರಾಜ್ ನಿರೂಪಿಸಿದರು.ಶಿಕ್ಷಕಿ ಚಂದ್ರಿಕಾ ವಂದಿಸಿದರು.

Post a Comment

0 Comments