Header Ads Widget

Whats-App-Image-2024-05-08-at-4-44-56-PM-4

ಪುತ್ತೂರು: ಸ್ವಿಫ್ಟ್ ಕಾರಿನಲ್ಲಿ ಅಕ್ರಮ ದನಗಳ ಸಾಗಾಟ : ನಾಲ್ಕು ಗೋವುಗಳ ರಕ್ಷಣೆ...!!

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸಮೀಪದ ಕಬಕ ಅಡ್ಯಲಾಯ ದೈವಸ್ಥಾನದ ಹಿಂಭಾಗದ ರಸ್ತೆಯಲ್ಲಿ ಸ್ವಿಫ್ಟ್ ಕಾರಿನಲ್ಲಿ ದನವನ್ನು ಅಕ್ರಮ ಸಾಗಾಟ ಮಾಡುತ್ತಿದ್ದಾಗ ಬಜರಂಗದಳ ಕಾರ್ಯಕರ್ತರು ತಡೆದ ಈ ಘಟನೆ ಸಂಭವಿಸಿದೆ.

ಕಾರಿನಲ್ಲಿ ನಾಲ್ಕು ಗೋವುಗಳು ಪತ್ತೆಯಾಗಿದ್ದು, ಕಾರು ಚಾಲಕ ಹಾಗೂ ಕಾರಿನಲ್ಲಿದ್ದವರು ಕಾರು ಹಾಗೂ ಗೋವುಗಳನ್ನು ಬಿಟ್ಟು ಪರಾರಿಯಾಗಿರುವುದಾಗಿ ಮೂಲಗಳಿಂದ ತಿಳಿದು ಬಂದಿದೆ.

ಬಜರಂಗದಳ ಕಬಕದ ಕಾರ್ಯಕರ್ತರು ಕಾರನ್ನು ತಡೆಯಲು ಪ್ರಯತ್ನಿಸಿದಾಗ ಕಾರಿನ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದು ಜಖಂಗೊಂಡಿದೆ.
ಕಾರಿನಲ್ಲಿ ಎರಡು ದನ ಹಾಗೂ ಎರಡು ಕರು ಪತ್ತೆಯಾಗಿದೆ. 

ಅದರ ಕಾಲುಗಳನ್ನು ಹಿಂಸಾತ್ಮಕ ರಿತಿಯಲ್ಲಿ ಕಟ್ಟಲಾಗಿತ್ತು. ಹಿಂಸಾತ್ಮಕವಾಗಿ ಗೋವುಗಳನ್ನು ಸಾಗಿಸುತ್ತಿರುವ ಖಚಿತ ಮಾಹಿತಿ ಪಡೆದ ಕಬಕದ ಬಜರಂಗದಳ ಕಾರ್ಯಕರ್ತರು ಕಾರನ್ನು ನಿಲ್ಲಿಸಲು ಸೂಚಿಸಿದ್ದು, ಈ ವೇಳೆ ಕಾರು ಚಾಲಕ ಪರಾರಿಯಾಗಲು ಯತ್ನಿಸಿದ್ದು ಇದರಿಂದ ಕಾರು ಚರಂಡಿಗೆ ಬಿದ್ದಿದೆ ಎಂದು ತಿಳಿಯಲಾಗಿದೆ.


Post a Comment

0 Comments