Header Ads Widget

Whats-App-Image-2024-05-08-at-4-44-56-PM-4

ಕಾರ್ಕಳ : ಮಾಳ ಕಡಾರಿ ಕ್ರಾಸ್‌ನಲ್ಲಿ ತೆಂಗಿನಕಾಯಿ ಸಾಗಿಸುತ್ತಿದ್ದ ಟೆಂಪೊ ಪಲ್ಟಿ : ಓರ್ವ ಮೃತ್ಯು : ನಾಲ್ವರಿಗೆ ಗಾಯ...!!

ಕಾರ್ಕಳ : ಮಾರ್ಚ್ : 22: ತೆಂಗಿನಕಾಯಿ ಸಾಗಿಸುತ್ತಿದ್ದ ಟೆಂಪೋ ಪಲ್ಟಿಯಾಗಿ ಓರ್ವ ಮೃತಪಟ್ಟ ಘಟನೆ ಮಾಳ ಗ್ರಾಮದ ಕಡಾರಿ ಕ್ರಾಸ್‌ನಲ್ಲಿ ನಡೆದಿದೆ.

ಹೆಜಮಾಡಿಯಿಂದ ಮಾಳದೆಡೆಗೆ ತೆಂಗಿನಕಾಯಿ ಸಾಗಿಸುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಕಡಾರಿ ಕ್ರಾಸ್‌ನಲ್ಲಿ ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ.

ಪರಿಣಾಮವಾಗಿ ಐವರು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಓರ್ವ ಮೃತಪಟ್ಟಿರುತ್ತಾರೆ.

ಟೆಂಪೋದಲ್ಲಿ ಚಾಲಕ ಸೇರಿದಂತೆ ಒಟ್ಟು 7 ಮಂದಿ ಪ್ರಯಾಣಿಸುತ್ತಿದ್ದರು. ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Post a Comment

0 Comments