Header Ads Widget

Whats-App-Image-2024-05-08-at-4-44-56-PM-4

ಪುತ್ತೂರು: ಕಳ್ಳತನ ಪ್ರಕರಣ : ತಮಿಳುನಾಡು ಮೂಲದ ನಟೋರಿಯಸ್ ಲೇಡಿ ಅಂದರ್...!!

ಪುತ್ತೂರು: ಕಳೆದ ಒಂದೂವರೆ ತಿಂಗಳ ಹಿಂದೆ ಚಿನ್ನಾಭರಣ ಕಳ್ಳತನ ಮಾಡಿದ್ದ ತಮಿಳುನಾಡು ಮೂಲದ ಅಂತ‌ರ್ ರಾಜ್ಯ ಕಳ್ಳತನ ಪ್ರಕರಣವನ್ನು ಭೇದಿಸಿದ ಪುತ್ತೂರು ನಗರ ಪೊಲೀಸರು ತಮಿಳುನಾಡಿನ ಮಹಿಳೆಯನ್ನು ಬಂಧಿಸಿ ಸುಮಾರು 6 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದುಕೊಂಡಿದ್ದಾರೆ.

ಕಳೆದ ಫೆ.12ರಂದು ಪುತ್ತೂರು ನಗರದ ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲಿ ರೇಷ್ಮಾ ಎನ್ ಎಂಬವರ ಬ್ಯಾಗಿನಲ್ಲಿದ್ದ ಚಿನ್ನಾಭರಣಗಳನ್ನು ಕಳವು ಮಾಡಿರುವ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು.

ಈ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಪ್ರಕರಣದ ಆರೋಪಿ ತಮಿಳುನಾಡು ಮೂಲದ ಅಂತ‌ರ್ ರಾಜ್ಯ ಕಳ್ಳತನ ಪ್ರಕರಣದ ಆರೋಪಿಯಾದ ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಈಶ್ವರಿ (45) ಎಂಬಾಕೆಯನ್ನು ಬಂಧಿಸಿದ್ದಾರೆ. ಆಕೆಯಿಂದ ಕಳವು ನಡೆಸಿದ, ಸುಮಾರು ರೂ. 6 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

Post a Comment

0 Comments