Header Ads Widget

Whats-App-Image-2024-05-08-at-4-44-56-PM-4

ಮಂಗಳೂರು: ತಂದೆಯೊಂದಿಗೆ ಮೀನುಗಾರಿಕೆಗೆ ತೆರಳಿದ್ದ ವೇಳೆ ಬಾಲಕನೋರ್ವ ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದು ಮೃತ್ಯು...!!

ಮಂಗಳೂರು: ನಗರದ ಪಣಂಬೂರು ಸಮೀಪದ ತಂದೆಯೊಂದಿಗೆ ಮೀನುಗಾರಿಕೆಗೆ ತೆರಳಿದ್ದ ವೇಳೆ ಬಾಲಕನೋರ್ವ ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.

ಮೃತಪಟ್ಟ ಬಾಲಕ ತೋಟಬೆಂಗ್ರೆ ಮಿಥುನ್‌ ಎಂಬವರ ಪುತ್ರ ಪ್ರಜೀತ್‌ (15) ಎಂದು ತಿಳಿದು ಬಂದಿದೆ.

ದೋಣಿಯಲ್ಲಿ ತೆರಳುತ್ತಿದ್ದಾಗ ಬಾಲಕ ನೀರಿಗೆ ಬಿದ್ದಿದ್ದಾನೆ. ಮೀನುಗಾರರು ರಕ್ಷಣೆಗಾಗಿ ತತ್‌ಕ್ಷಣ ಕಾರ್ಯಾಚರಣೆ ನಡೆಸಿದರೂ ತೆರೆಗಳ ನಡುವೆ ಸಿಲುಕಿದ ಆತನನ್ನು ಪತ್ತೆ ಮಾಡುವಾಗ ಒಂದು ತಾಸು ವಿಳಂಬವಾಗಿದೆ. ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲಿ ಮೃತಪಟ್ಟಿದ್ದ ಎನ್ನಲಾಗಿದೆ.

ಈ ಬಗ್ಗೆ ಪಣಂಬೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Post a Comment

0 Comments