Header Ads Widget

Whats-App-Image-2024-05-08-at-4-44-56-PM-4

ಕಡಬ : ಬಾರಿ ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಮರ : ದಂಪತಿಗಳು ಅಪಾಯದಿಂದ ಪಾರು ..!!

ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಭಾರಿ ಗಾಳಿ ಮಳೆ ಸುರಿದಿದ್ದು ಗಾಳಿಗೆ ಮರವೊಂದು ಮನೆಯ ಮೇಲೆ ಬಿದ್ದು ಹಾನಿಯಾಗಿದ್ದರೆ ಮನೆಯಲ್ಲಿದ್ದದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಡಬ ತಾಲೂಕಿನ ಕುಟ್ರುಪಾಡಿ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದ್ದು ಬಾಬು ಮತ್ತು ಲಕ್ಷ್ಮೀ ಅವರ ಮನೆ ಮರ ಬಿದ್ದ ಪರಿಣಾಮ ಹಾನಿಯಾಗಿದೆ. ಮನೆಯ ಶೌಚಾಲಯ, ನೀರಿನ ಟ್ಯಾಂಕಿ ಕೂಡ ಸಂಪೂರ್ಣ ನಾಶವಾಗಿದೆ. ಸ್ಥಳಕ್ಕೆಕಡಬ ತಹಶೀಲ್ದಾರ್ ಪ್ರಭಾಕರ್ ಖಜೂರೆ, ಅರಣ್ಯ ಇಲಾಖಾ ಸಿಬಂದಿ, ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಕ್ಕದ ಒಂದೆರಡು ಮನೆಗಳಿಗೂ ಹಾನಿ ಸಂಭವಿಸಿದೆ. ಕಡಬ ತಾಲೂಕಿನಾದ್ಯಂತ ವಿದ್ಯುತ್ ಸರಬರಾಜು ಸ್ಥಗಿತಗೊಂಡಿದೆ.

Post a Comment

0 Comments