Header Ads Widget

ಉಡುಪಿ: ಬಸ್ ಹಾಗೂ ಬೈಕ್ ನಡುವೆ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು...!!

ಉಡುಪಿ: ನಗರದ ನಿಟ್ಟೂರು ಪೆಟ್ರೋಲ್ ಪಂಪ್ ಬಳಿ ಬಸ್ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬ್ಯೆಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಇಂದು ಸಂಜೆ ಸಂಭವಿಸಿದೆ.

ಬಸ್ ಕರಾವಳಿ ಬೈಪಾಸ್ ಮಾರ್ಗವಾಗಿ ಸಂತೆಕಟ್ಟೆಯತ್ತ ತೆರಳುತ್ತಿತ್ತು. ಈ ವೇಳೆ  ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ನಡೆದ ಬಳಿಕ ಕೆಲ ಕಾಲ ಸಂಚಾರ ದಟ್ಟಣೆ ಉಂಟಾಯಿತು.

ಸಂಚಾರಿ ಪೊಲೀಸರು ಸ್ಥಳಕ್ಕಾಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.ಮೃತ ದುರ್ದೈವಿ ಬಾಗಲಕೋಟೆ ಮೂಲದವರು ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ಉಡುಪಿ ಸಂಚಾರಿ ಪೊಲೀಸರು ಅಪಘಾತ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Post a Comment

0 Comments