Header Ads Widget

Whats-App-Image-2024-05-08-at-4-44-56-PM-4

ಲಾರಿ ಮತ್ತು ಬೈಕ್ ನಡುವೆ ಅಪಘಾತ : ಕಾಲೇಜು ವಿದ್ಯಾರ್ಥಿ ಮೃತ್ಯು...!!

ಕಾಸರಗೋಡು : ಲಾರಿ ಹಾಗೂ ಬೈಕ್ ನಡುವೆ ಉಂಟಾದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ನಡೆದಿದೆ.

ಮೃತ ಯುವಕನನ್ನು‌ ಕುಂಬಳೆ ಸಮೀಪದ ಬಂಬ್ರಾಣ ಅಂಡಿತ್ತಡ್ಕ ದ ಯೂಸಫ್ ಕೈಫ್ ( 19) ಎಂದು ತಿಳಿದು ಬಂದಿದೆ.

ಮಂಗಳೂರಿನ ಕಾಲೇಜೊಂದರ ವಿದ್ಯಾರ್ಥಿಯಾಗಿದ್ದ ಕೈಫ್ ನಾಲ್ಕು ದಿನಗಳ ಹಿಂದೆ ಬೈಕ್ ನಲ್ಲಿ ಕಾಲೇಜಿಗೆ ತೆರಳುತ್ತಿದ್ದಾಗ ಉಪ್ಪಳ ಸಮೀಪದ ಕುಕ್ಕಾರ್ ಎಂಬಲ್ಲಿ ಅಪಘಾತ ನಡೆದಿತ್ತು. ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದ ಈತ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಕುಂಬಳೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Post a Comment

0 Comments