Header Ads Widget

Whats-App-Image-2024-05-08-at-4-44-56-PM-4

ಉಡುಪಿ: ಟಿಪ್ಪರ್ ಹಾಗೂ ಬೈಕ್ ನಡುವೆ ಅಪಘಾತ : ಬೈಕ್ ಸವಾರ ಸ್ಥಳದಲ್ಲೇ ಮೃತ್ಯು...!!

ಉಡುಪಿ: ನಗರದಲ್ಲಿ ಟಿಪ್ಪರ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.

ಉಡುಪಿ-ಅಂಬಾಗಿಲು ಮುಖ್ಯ ರಸ್ತೆಯಲ್ಲಿ ಶುಕ್ರವಾರ ಈ ಘಟನೆ ನಡೆದಿದೆ. ಟಿಪ್ಪರ್ ನ ಅಡಿಯಲ್ಲಿ ಬೈಕ್ ಸಿಲುಕಿಕೊಂಡಿದ್ದು, ಅಪಘಾತದ ರಭಸಕ್ಕೆ ಸವಾರ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. 

ಮೃತ ಬೈಕ್ ಸವಾರ ಬ್ರಹ್ಮಾವರ ಮಟಪಾಡಿ ಮೂಲದ ಪ್ರಭಾಕರ ಆಚಾರಿ ಎಂದು ಗುರುತಿಸಲಾಗಿದೆ.

ಅವರು ಪೆರಂಪಳ್ಳಿಯಿಂದ ಅಂಬಾಗಿಲು ಮುಖ್ಯರಸ್ತೆಗೆ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಬೈಕ್ ನಲ್ಲಿದ್ದ ಸಹಸವಾರ ಗಂಭೀರ ಗಾಯಗೊಂಡಿದ್ದು, ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Post a Comment

0 Comments