Header Ads Widget

ವಿಟ್ಲ: ಬಾವಿಗೆ ರಿಂಗ್ ಹಾಕುವಾಗ ಆಕ್ಸಿಜನ್ ಸಿಗದೇ ಇಬ್ಬರು ಮೃತ್ಯು...!!

ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪ ಬಾವಿಗೆ ರಿಂಗ್ ಹಾಕುವಾಗ ಆಕ್ಸಿಜನ್ ಸಿಗದೇ ಇಬ್ಬರು ಮೃತಪಟ್ಟ ಘಟನೆ ಕೇಪು ಗ್ರಾಮದ ಪಡಿಬಾಗಿಲು ಎಂಬಲ್ಲಿ ಸಂಭವಿಸಿದೆ.

ಮೃತ ಕಾರ್ಮಿಕರನ್ನು ಪರ್ತಿಪ್ಪಾಡಿ ನಿವಾಸಿ ಇಬ್ರಾಹಿಂ, ಮಲಾರ್ ನಿವಾಸಿ ಆಲಿ ಎಂದು ತಿಳಿಯಲಾಗಿದೆ.

ಸುಮಾರು 30 ಅಡಿ ಆಳದ ಬಾವಿಗೆ ರಿಂಗ್ ಹಾಕಿ ನಂತರ ಕ್ಲೀನಿಂಗ್ ಮಾಡಲೆಂದು ಬಾವಿಗೆ ಇಳಿದ ಕಾರ್ಮಿಕ ಆಕ್ಸಿಜನ್ ಕೊರತೆಯಿಂದ ಸ್ಥಳದಲ್ಲೇ ಮೃತಪಟ್ಟಿದ್ದು, ಬಾವಿಗೆ ಇಳಿದವನು ಮೇಲಕ್ಕೆ ಬಾರದಿರುವ ಹಿನ್ನೆಲೆ ಇನ್ನೊಬ್ಬ ಇಳಿದಿದ್ದು, ಈ ವೇಳೆ ಆತನೂ ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿದ್ದಾನೆ. ಮೃತದೇಹವನ್ನು ವಿಟ್ಲ ಸಮುದಾಯ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.

Post a Comment

0 Comments