Header Ads Widget

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ ಪ್ರಥಮ, ಉಡುಪಿ ದ್ವಿತೀಯ ಸ್ಥಾನ..!!


 ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ.

2024 ರ ದ್ವಿತೀಯ ಪಿಯು ಪರೀಕ್ಷೆಗೆ 3.3 ಲಕ್ಷ ಹುಡುಗರು ಮತ್ತು 3.6 ಲಕ್ಷ ಹುಡುಗಿಯರು ಹಾಜರಾಗಿದ್ದರು. ರಾಜ್ಯದಾದ್ಯಂತ 1,124 ಕೇಂದ್ರಗಳಲ್ಲಿ ನಡೆದಿದ್ದ ಪರೀಕ್ಷೆಗೆ ಒಟ್ಟು 6.98 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು.

ದಕ್ಷಿಣ ಕನ್ನಡ ಜಿಲ್ಲೆ 97.37% ನೊಂದಿಗೆ ರಾಜ್ಯಕ್ಕೇ ಪ್ರಥಮ ಸ್ಥಾನದಲ್ಲಿದೆ. ಉಡುಪಿ – 96.80% ನೊಂದಿಗೆ ದ್ವಿತೀಯ, ವಿಜಯಪುರ – 94.89% ನೊಂದಿಗೆ ತೃತೀಯ ಸ್ಥಾನ ಪಡೆದಿದೆ. ಗದಗ ಜಿಲ್ಲೆ 72.86% ನೊಂದಿಗೆ ಕೊನೆ ಸ್ಥಾನದಲ್ಲಿದೆ.

11 ಗಂಟೆಗೆ ಅಧಿಕೃತ ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳು ಲಾಗಿನ್ ಕ್ರೆಡೆನ್ಶಿಯಲ್ಸ್ ನಮೂದಿಸುವ ಮೂಲಕ ಪಿಯು ಮಂಡಳಿಯ ಅಧಿಕೃತ ವೆಬ್ಸೈಟ್ karresults.nic.in ಮತ್ತು pue.kar.nic ಮೂಲಕ ದ್ವಿತೀಯ ಪಿಯು ಫಲಿತಾಂಶಗಳನ್ನು ಪರಿಶೀಲಿಸಬಹುದಾಗಿದೆ.

Post a Comment

0 Comments