Header Ads Widget

Whats-App-Image-2024-05-08-at-4-44-56-PM-4

ಉಪ್ಪಿನಂಗಡಿ: ಮನೆಯೊಂದರಲ್ಲಿ ವಿದ್ಯುತ್ ಶಾರ್ಟ್ ಸಕ್ಯೂಟ್ : ಲಕ್ಷಾಂತರ ರೂ. ಮೌಲ್ಯದ ಸಾಮಗ್ರಿ ಬೆಂಕಿಗಾಹುತಿ..!!

ಉಪ್ಪಿನಂಗಡಿ : ವಿದ್ಯುತ್ ಶಾರ್ಟ್ ಸಕ್ಯೂಟ್ ನಿಂದ ಮನೆಯೊಂದಕ್ಕೆ ಬೆಂಕಿ ತಗುಲಿ ಲಕ್ಷಾಂತರ ರೂ. ಮೌಲ್ಯದ ಮನೆ ಸಾಮಗ್ರಿ ಬೆಂಕಿಗಾಹುತಿಯಾದ ಘಟನೆ ಉಪ್ಪಿನಂಗಡಿ ಗ್ರಾಮದ ಮಠ ಎಂಬಲ್ಲಿ ಸಂಭವಿಸಿದೆ.

ಅಸ್ಲಂ ಎಂಬವರ ಮನೆಯಲ್ಲಿ ಶನಿವಾರ ಮಧ್ಯಾಹ್ನ ಈ ಅವಘಡ ಸಂಭವಿಸಿದೆ. ಮನೆಯ ಮಾಲಕ ವಿದೇಶದಲ್ಲಿದ್ದು, ಅವರ ಪತ್ನಿ ಮನೆಗೆ ಬೀಗ ಹಾಕಿ ತನ್ನ ಮಕ್ಕಳೊಂದಿಗೆ ಪೇಟೆಗೆ ಹೋಗಿದ್ದರು. ಆ ಸಂದರ್ಭದಲ್ಲಿ ಮನೆಯೊಳಗಿನಿಂದ ಹೊಗೆ ಹೊರಬರುತ್ತಿರುವುದನ್ನು ಕಂಡ ಸ್ಥಳೀಯರು ಹತ್ತಿರ ಬಂದು ಪರಿಶೀಲಿಸಿದಾಗ ಮನೆಯೊಳಗೆ ಬೆಂಕಿ ಬಿದ್ದಿರುವುದು ಗಮನಕ್ಕೆ ಬಂದಿತ್ತು. ತಕ್ಷಣ ಸ್ಥಳೀಯರು ಬೆಂಕಿ ನಂದಿಸಲು ಯತ್ನಿಸಿದರೂ, ಅದು ಅಸಾಧ್ಯವಾದಾಗ ಅಗ್ನಿ ಶಾಮಕ ದಳವನ್ನು ಸ್ಥಳಕ್ಕೆ ಕರೆಸಿ ಬೆಂಕಿಯನ್ನು ನಂದಿಸಲಾಯಿತು.

ಆಕಸ್ಮಿಕ ಬೆಂಕಿಯಿಂದಾಗಿ ಮನೆಯೊಳಗಿದ್ದ ಫ್ರಿಡ್ಜ್ ವಾಷಿಂಗ್ ಮೆಷಿನ್, ಪೀಠೋಪಕರಣಗಳ, ಬಟ್ಟೆಬರೆ, ಹಾಸಿಗೆ ಸಹಿತ ಬೆಲೆ ಬಾಳುವ ವಸ್ತುಗಳು ಸುಟ್ಟು ಕರಕಲಾಗಿದೆ ಎಂದು ಅಗ್ನಿಶಾಮಕದಳದ ಠಾಣಾಧಿಕಾರಿ ತಿಳಿಸಿದ್ದಾರೆ.

Post a Comment

0 Comments