Header Ads Widget

ಪಶ್ಚಿಮ ಬಂಗಾಳದಲ್ಲಿ ಅಪ್ಪಳಿಸಿದ ಚಂಡಮಾರುತ : ಕನಿಷ್ಠ ನಾಲ್ವರು ಮೃತ್ಯು...!!

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಜಲ್ಪೈಗುರಿಯಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಿಂದಾಗಿ ಚಂಡಮಾರುತ ಅಪ್ಪಳಿಸಿ ಕನಿಷ್ಠ ನಾಲ್ಕು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಏಕಾಏಕಿ ಸುರಿದ ಮಳೆಯಿಂದಾಗಿ ಚಂಡಮಾರುತ(Cyclonic Storm) ಅಪ್ಪಳಿಸಿದೆ. ಪರಿಣಾಮ ಜಿಲ್ಲೆಯ ಬಹುತೇಕ ಭಾಗಗಳು ಮತ್ತು ನೆರೆಯ ಮೈನಗುರಿನ ಹಲವು ಪ್ರದೇಶಗಳ ಹಲವಾರು ಮನೆಗಳು ಹಾನಿಗೊಳಗಾಗಿವೆ. ಮರಗಳು ನೆಲಸಮಗೊಂಡಿವೆ.ಜೊತೆಗೆ ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜರಹತ್, ಬರ್ನಿಶ್, ಬಕಾಲಿ, ಜೋರ್ಪಾಕ್ಡಿ, ಮಧಬ್ದಂಗ ಮತ್ತು ಸಪ್ತಿಬರಿಗಳು ಹೆಚ್ಚು ಹಾನಿಗೊಳಗಾದ ಪ್ರದೇಶಗಳಾಗಿವೆ ಎಂದು ವರದಿಯಾಗಿದೆ.

ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯ ನಡೆಯುತ್ತಿದೆ ಎಂದು ವಿಪತ್ತು ನಿರ್ವಹಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಾಲ್ವರು ಮೃತಪಟ್ಟಿದ್ದು, ಹಲವಾರು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಧುಪ್ಗುರಿ ಶಾಸಕ ನಿರ್ಮಲ್ ಚಂದ್ರ ರಾಯ್ ಹೇಳಿದ್ದಾರೆ.

ನಾಗರಿಕ ಆಡಳಿತ ಮತ್ತು ಪೊಲೀಸ್ ಮತ್ತು ವಿಪತ್ತು ನಿರ್ವಹಣೆಯ ಸಿಬ್ಬಂದಿಯನ್ನು ಪರಿಹಾರ ಕಾರ್ಯಗಳಿಗಾಗಿ ನಿಯೋಜಿಸಲಾಗಿದೆ. ಹೆಚ್ಚುವರಿಯಾಗಿ, ಕ್ವಿಕ್ ರೆಸ್ಪಾನ್ಸ್ ಟೀಮ್‌ಗಳನ್ನು (ಕ್ಯೂಆರ್‌ಟಿ) ಸೇವೆಗೆ ಕರೆಸಲಾಗಿದೆ. ಸಂಕಷ್ಟದಲ್ಲಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಮೃತರಿಗೆ ಸಂತಾಪ ಸೂಚಿಸಿರುವ ಸಿಎಂ, ಸಂತ್ರಸ್ತರಿಗೆ ಜಿಲ್ಲಾಡಳಿತ ಅಗತ್ಯ ನೆರವು ನೀಡಲಿದೆ ಎಂದು ಹೇಳಿದ್ದಾರೆ.

Post a Comment

0 Comments