Header Ads Widget

Whats-App-Image-2024-05-08-at-4-44-56-PM-4

ಲೈಂಗಿಕ ಆರೋಪ ಎದುರಿಸಿ ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣನನ್ನು ಬಂಧಿಸುವುದು ಬಲು ಸುಲಭ : ಅಣ್ಣಾಮಲೈ...!!

ಬೆಂಗಳೂರು: ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಮಹಿಳೆಗೆ ಲೈಂಗಿಕ ದೌರ್ಜನ್ಯ ನೀಡಿರುವ ಆರೋಪ ಎದುರಿಸುತ್ತಿದ್ದು ಇದೀಗ ವಿದೇಶದಲ್ಲಿದ್ದಾರೆ.ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ದಳ ನಡೆಸುತ್ತಿದ್ದು, ವಿಚಾರಣೆಗೆ ಹಾಜರಾಗುವಂತೆ ಶೋಕಾಸ್ ನೋಟಿಸ್ ನೀಡಿದೆ. ಆರೋಪಿ ಪ್ರಜ್ವಲ್ ರೇವಣ್ಣ ವಿದೇಶದಲ್ಲಿರುವುದರಿಂದ ಅವರನ್ನು ಬಂಧಿಸಿ ಕರೆತರಲು ಕೇಂದ್ರ ವಿದೇಶಾಂಗ ಸಚಿವಾಲಯ ಮಧ್ಯಪ್ರವೇಶ ಮಾಡಬೇಕು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ. 

ಈ ಕುರಿತು ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿರುವ ಮಾಜಿ ಐಪಿಎಸ್ ಅಧಿಕಾರಿ, ತಮಿಳನಾಡು ಬಿಜೆಪಿ ಘಟಕದ ರಾಜ್ಯಾಧ್ಯಕ್ಷ ಅಣ್ಣಾಮಲೈ ಕಾರ್ಯವಿಧಾನದ ಪ್ರಕಾರ, ಎಸ್ಐಟಿ ಅಥವಾ ಸಿಐಡಿ ಸಿಬಿಐಗೆ ನೋಡಲ್ ಏಜೆನ್ಸಿಯಾಗಿ ಕಾರ್ಯನಿರ್ವಹಿಸುತ್ತದೆ. ವಿದೇಶಕ್ಕೆ ತಲೆಮರೆಸಿಕೊಂಡಿರುವ ಆರೋಪಿಗಳನ್ನು ಬಂಧಿಸಲು ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಲು ಅಥವಾ ಇಂಟರ್ಪೋಲ್ ನೆರವು ಪಡೆಯಲು ರಾಜ್ಯ ಸರ್ಕಾರ ಸಿಬಿಐ ನಿರ್ದೇಶಕರಿಗೆ ಪತ್ರ ಬರೆಯಬೇಕು ಎಂದು ಹೇಳಿದ್ದಾರೆ.

ರೆಡ್ ಕಾರ್ನರ್ ಜಾರಿಗೊಳಿಸಿದ ಬಳಿಕ ಆರೋಪಿ ಯಾವುದೇ ವಿಮಾನ ನಿಲ್ದಾಣಕ್ಕೆ ಬಂದರೆ ಕೂಡಲೆ ಅವನನ್ನು ಅಲ್ಲಿನ ಪೊಲೀಸರು ಬಂಧಿಸುತ್ತಾರೆ. ಬಳಿಕ ಆರೋಪಿ ಬೇಕಾಗಿರುವ ಠಾಣೆಗೆ ಮಾಹಿತಿ ನೀಡುತ್ತಾರೆ. ನಾನು ಕರ್ನಾಟಕದ ಸೇವೆ ಸಲ್ಲಿಸುತ್ತಿರುವಾಗ ಭೂಗತ ಪಾತಕಿ ಬನ್ನಂಜೆ ರಾಜನನ್ನು ಮೊರಾಕೊದಿಂದ ಪ್ರಧಾನಿಗೆ ಯಾವುದೇ ಪತ್ರ ಬರೆಯದೆ ಬಂಧಿಸಿ ಕರೆತಂದೆವು. ಇದು ಬಿಟ್ಟು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆಯುತ್ತಾರೆ. ಇಲ್ಲಿ ಬರೀ ರಾಜಕೀಯ ಮಾಡುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

Post a Comment

0 Comments