Header Ads Widget

ಉಡುಪಿ: ಅಗ್ನಿ ಅವಘಡದಲ್ಲಿ ಬಾರ್ ಮಾಲಕ ರಮಾನಂದ ಶೆಟ್ಟಿ ಮೃತ್ಯು : ಪತ್ನಿ ಗಂಭೀರ...!!

ಉಡುಪಿ: ನಗರದ ಅಂಬಲಪಾಡಿ ಸಮೀಪ ಬಾರ್‌ವೊಂದರ ಮಾಲಕರ ಮನೆಯಲ್ಲಿ ನಡೆದ ಅಗ್ನಿ ಅವಘಡದಲ್ಲಿ ಬಾರ್ ಮಾಲಕ ಮೃತಪಟ್ಟಿದ್ದಾರೆ. ಅವರ ಪತ್ನಿ ಗಂಭೀರವಾಗಿ ಗಾಯಗೊಂಡ ಘಟನೆ ಜು.15ರ ಸೋಮವಾರ ಮುಂಜಾನೆ ಸಂಭವಿಸಿದೆ.

ನಗರದ ಅಂಬಲಪಾಡಿಯ ಶೆಟ್ಟಿ ಬಾರ್ & ರೆಸ್ಟೋರೆಂಟ್‌ನ ಮಾಲಕರ ಮನೆಯಲ್ಲಿ ಅಗ್ನಿ ಅವಘಡ ನಡೆದಿದೆ ಎಂದು ತಿಳಿದು ಬಂದಿದೆ.

ಬೆಂಕಿಯ ಕೆನ್ನಾಲಿಗೆ ಸಿಲುಕಿದ ಬಾರ್ ಮಾಲಕ ರಮಾನಂದ ಶೆಟ್ಟಿ ಅವರು ಸಾವನ್ನಪ್ಪಿದ್ದಾರೆ.ಈ ಘಟನೆಯಲ್ಲಿ ಅವರ ಪತ್ನಿ ಅಶ್ವಿನಿ ಅವರಿಗೂ ಗಂಭೀರ ಗಾಯವಾಗಿದ್ದು, ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಇಬ್ಬರು ಮಕ್ಕಳನ್ನು ರಕ್ಷಿಸಲಾಗಿದೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದಾರೆ. ಮನೆಯೊಳಗೆ ಮತ್ತಿಬ್ಬರು ಸಿಲುಕಿಕೊಂಡಿದ್ದು ಅವರ ರಕ್ಷಣಾ ಕಾರ್ಯಚರಣೆ ನಡೆಸಿದ್ದಾರೆ.ಮನೆಯ ಎಸಿ ಬ್ಲಾಸ್ಟ್ ಆಗಿ ಬೆಂಕಿ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದೆ.





Post a Comment

0 Comments