ಕಲಬುರಗಿ: ಶಿಕ್ಷಕನಿಂದಲೇ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ.
5ನೇ ತರಗತಿ ಓದುತ್ತಿರುವ 10 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಘಟನೆ ಸಂಬಂಧ ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಮುಕ ಶಿಕ್ಷಕನ ಹೆಡೆಮುರಿಕಟ್ಟಲಾಗಿದೆ.
ಶಾಲೆ ಅವಧಿ ಮುಗಿದ ಬಳಿಕ ವಿದ್ಯಾರ್ಥಿನಿಯನ್ನು ಕರೆಯಿಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ಶಾಲಾ ಕೋಣೆಯಲ್ಲೆ ಶಿಕ್ಷಕ ಮಲ್ಲಿಕಾರ್ಜುನ ಕುಮಸಿ 5 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.
0 Comments