ಲಕ್ನೋ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಸಮಾಜವಾದಿ ಪಕ್ಷದ ಮುಖಂಡನನ್ನು ಪೊಲೀಸರು ಬಂಧಿಸಿದ್ದಾರೆ.
ಮಧ್ಯರಾತ್ರಿ 1:30ರ ಸುಮಾರಿಗೆ ಪೊಲೀಸರ 112 ಸಹಾಯವಾಣಿ ಸಂಖ್ಯೆಗೆ ಕರೆಬಂದ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ಧಾವಿಸಿ ನವಾಬ್ ಸಿಂಗ್ ಯಾದವ್ ಎನ್ನುವ ಸಮಾಜವಾದಿ ಪಕ್ಷದ ಮುಖಂಡನನ್ನು ಬಂಧಿಸಿದ್ದಾರೆ.
ಉದ್ಯೋಗಾವಕಾಶ ನೆಪದಲ್ಲಿ ನನ್ನ ಚಿಕ್ಕಮ್ಮ ಇವರ ನಿವಾಸಕ್ಕೆ ಕರೆದುಕೊಂಡು ಬಂದಿದ್ದ ಆತ, ಆಕೆಯನ್ನು ವಿವಸ್ತ್ರಗೊಳಿಸಿ, ಆಕೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರಕ್ಕೆ ಯತ್ನಿಸಲಾಗಿದೆ ಈ ವೇಳೆ ಪೊಲೀಸ್ ಸಹಾಯವಾಣಿಗೆ ಅಪ್ರಾಪ್ತೆ ಕರೆ ಮಾಡಿ ವಿಷಯ ತಿಳಿಸಿದ್ದಾಳೆ.
ಕೂಡಲೇ ಪೊಲೀಸರು ವಿಳಾಸವನ್ನು ಪತ್ತೆ ಹಚ್ಚಿ ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಕನೌಜ್ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಅಮಿತ್ ಕುಮಾರ್ ಆನಂದ್ ಹೇಳಿದ್ದಾರೆ.
0 Comments