ಹುಬ್ಬಳ್ಳಿ : ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಗಾಂಜಾ ಮಾರಾಟ ಮಾಡುತ್ತಿದ್ದವರನ್ನು ಬೆಂಡಿಗೇರಿ ಠಾಣೆ ಪೊಲೀಸರು ಬಂಧಿಸಿ, 2.50 ಲಕ್ಷ ರೂ. ಮೌಲ್ಯದ 2.5 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಓಡಿಸ್ಸಾ ಮೂಲದ ಕೇಶಬಚಂದ್ರ, ನೀಲಾಂಬರ ರಾವುತ್, ಉತ್ತರಾಖಂಡದ ಮಹಮದ್ ಆಲಿ, ಹಾವೇರಿಯ ತೌಸಿಫ್ ಅಹ್ಮದ್, ಹುಬ್ಬಳ್ಳಿಯ ಪವನ, ಸಿದ್ಧಾರ್ಥ, ಮಂಜುನಾಥ, ನದೀಂ, ವಿಠ್ಠಲ, ಶಾನವಾಜ, ಗಣಪತಸಾ, ಕಾರ್ತಿಕ ಸೇರಿ 12 ಜನರನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಗಳಿಂದ 5ಲಕ್ಷ ರೂ. ಮೌಲ್ಯದ ಕಾರು, ಎರಡು ತಲ್ವಾರ್, ಡ್ರ್ಯಾಗರ್, 10 ಮೊಬೈಲ್ ಪೋನ್‌ಗಳು ಹಾಗೂ 2 ಸಾವಿರ ರೂ. ನಗದು ವಶಪಡಿಸಿಕೊಂಡು, ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಗಬ್ಬೂರ ಕ್ರಾಸ್ ಬಳಿ ಆರೋಪಿಗಳನ್ನು ಕರೆದೊಯ್ದು ಪಂಚನಾಮೆ ನಡೆಸುತ್ತಿದ್ದಾಗ, ಕೇಶವಚಂದ್ರ, ನೀಲಾಂಬರ ಮತ್ತು ತೌಸಿಫ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದರು. ಆ ವೇಳೆ ಸಿಸಿಬಿ ವಿಭಾಗದ ಪಾಟೀಲ ಮತ್ತು ಹೆದ್ದೇರಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕಿಮ್ಸ್‌ಗೆ ದಾಖಲಿಸಲಾಗಿದೆ ಎಂದು ತಿಳಿಸಿದರು.
0 Comments