Header Ads Widget

ಬೆಂಗಳೂರು: ರೇಣುಕಾಸ್ವಾಮಿ ಶೆಡ್​ನಲ್ಲಿ ಕೈ ಮುಗಿದು ಅಂಗಲಾಚುತ್ತಿರುವ ಫೋಟೋ ವೈರಲ್...!!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಪೊಲೀಸರು ಚಾರ್ಜ್​ಶೀಟ್ ಸಲ್ಲಿಕೆ ಮಾಡಿದ್ದಾರೆ. ದರ್ಶನ್ ಸೇರಿ ಅನೇಕರ ವಿರುದ್ಧ ಪ್ರಬಲ ಸಾಕ್ಷಿಗಳು ಸಿಕ್ಕಿದ್ದು, ದೋಷಾರೋಪ ಪಟ್ಟಿಯಲ್ಲಿ ವಿವರಣೆ ನೀಡಲಾಗಿದೆ.

ಈ ಮಧ್ಯೆ ರೇಣುಕಾ ಸ್ವಾಮಿ ಅಂಗಲಾಚುತ್ತಿರುವ ಫೋಟೋ ಮಾತ್ರವಲ್ಲದೆ ಅವರು ಶವವಾಗಿ ಬಿದ್ದ ಫೋಟೋಗಳು ಸಿಕ್ಕಿವೆ. ಪಟ್ಟಣಗೆರೆ ಶೆಡ್​ನಲ್ಲಿ ಕೊಲೆ ಮಾಡುವ ಸಂದರ್ಭದಲ್ಲಿ ತೆಗೆದ ಫೋಟೋ ಇದಾಗಿದೆ.
ಆರೋಪಿಗಳ ಮೊಬೈಲ್​ನಲ್ಲಿ ಇದನ್ನು ಸೆರೆ ಹಿಡಿದುಕೊಳ್ಳಲಾಗಿತ್ತು. ಆ ಬಳಿಕ ಇದನ್ನು ಡಿಲೀಟ್ ಮಾಡಿದ್ದರು. ಈಗ ಈ ಫೋಟೋಗಳನ್ನು ರಿಟ್ರೀವ್ ಮಾಡಲಾಗಿದೆ.

ಚಾರ್ಜ್​ಶೀಟ್​​ನಲ್ಲಿ ಈ ಫೋಟೋಗಳನ್ನು ಲಗತ್ತಿಸಲಾಗಿದೆ. ಇದು ಪ್ರಕರಣದಲ್ಲಿ ಪ್ರಮುಖ ಸಾಕ್ಷಿ ಆಗುವ ಸಾಧ್ಯತೆ ಇದೆ.ಆದರೆ ಈಗ ಈ ಫೋಟೋ ಎಲ್ಲ ಕಡೆ ವೈರಲ್ ಆಗುತ್ತಿದೆ.

Post a Comment

0 Comments