Header Ads Widget

ಪಟಾಕಿ ತೆಗೆದುಕೊಂಡು ಹೋಗುತ್ತಿದ್ದ ವೇಳೆ ಸ್ಫೋಟ : ಓರ್ವ ಮೃತ್ಯು : ಆರು ಮಂದಿ ಗಂಭೀರ...!!

ಹೈದರಾಬಾದ್‌: ಆಂಧ್ರಪ್ರದೇಶದ ಏಲೂರು ಜಿಲ್ಲೆಯಲ್ಲಿ ದೀಪಾವಳಿ ಪ್ರಯುಕ್ತ ಪ್ರಯುಕ್ತ ದೊಡ್ಡ ಪ್ರಮಾಣದ ಪಟಾಕಿ (ಈರುಳ್ಳಿ ಬಾಂಬ್‌) ತೆಗೆದುಕೊಂಡು ಹೋಗುತ್ತಿದ್ದ ವೇಳೆ ಸ್ಫೋಟಗೊಂಡು ಓರ್ವ ಅಸುನೀಗಿದ್ದಾನೆ ಎಂದು ಮಾಹಿತಿ ತಿಳಿದು ಬಂದಿದೆ.

ಈ ಘಟನೆಯಲ್ಲಿ 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಫೋಟ ಉಂಟಾದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆ ನಡೆದ ಸ್ಥಳದಿಂದ ಇಬ್ಬರು ಓಡಿ ಬರುತ್ತಿರುವುದು ಅದರಲ್ಲಿ ದಾಖಲಾಗಿದೆ.ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Post a Comment

0 Comments