Header Ads Widget

ಮಲ್ಪೆ : ಬೈಕ್ ಪಾರ್ಕಿಂಗ್ ವಿಚಾರದ ವಾಗ್ವಾದ : ದಂಪತಿಗಳ ಮೇಲೆ ಮಾರಣಾಂತಿಕ ಹಲ್ಲೆ...!!

ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆ ಬೀಚ್‌ನಲ್ಲಿ ಕಳೆದ ರಾತ್ರಿ ಬೈಕ್ ಪಾರ್ಕಿಂಗ್ ವಿಚಾರದಲ್ಲಿ ವಾಗ್ವಾದ ನಡೆದು ದಂಪತಿಗಳ ಮೇಲೆ ತಂಡವೊಂದು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಸಂಭವಿಸಿದೆ.

ಮಲ್ಪೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಶೇಖ‌ರ್ ತಿಂಗಳಾಯ ಮತ್ತು ಗೀತಾ ಹಲ್ಲೆಗೊಳಗಾದ ದಂಪತಿಗಳು. ಸಾಗ‌ರ್, ಚರಣ್, ಯಶವಂತ್, ಕಿಶೋ‌ರ್, ರಾಜ ಅವರು ಪಾರ್ಕಿಂಗ್ ವಿಚಾರದಲ್ಲಿ ದಂಪತಿಗಳಿಗೆ ಹಲ್ಲೆ ನಡೆಸಿದ್ದಾರೆ.  

ಘಟನೆಯ ದೃಶ್ಯ ಸಿಸಿ ಕ್ಯಾಮರದಲ್ಲಿ ದಾಖಲಾಗಿದ್ದು,- ಹಲ್ಲೆಗೊಳಾಗದ ದಂಪತಿಗಳು ಉಡುಪಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಪೊಲೀಸರು ಹಲ್ಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Post a Comment

0 Comments