Header Ads Widget

ಬ್ರಹ್ಮಾವರ : ಕಾರು ಢಿಕ್ಕಿ ಹೊಡೆದು ಗಾಯಗೊಂಡಿದ್ದ ಚಾಂತಾರಿನ ಯುವಕ ಸಾವು...!!

ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರದ ಹನೆಹಳ್ಳಿ ಸಮೀಪ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಚಾಂತಾರಿನ ಯುವಕ ಮೃತಪಟ್ಟ ಘಟನೆ ನಡೆದಿದೆ.

ಮೃತ ದುರ್ದೈವಿಯನ್ನು ಚಾಂತಾರಿನ ಹರಿಪ್ರಸಾದ್‌ (29) ಎಂದು ತಿಳಿಯಲಾಗಿದೆ.

ಆನ್‌ಲೈನ್‌ ಕಂಪೆನಿಯ ಡೆಲಿವರಿ ಕೆಲಸ ಮಾಡುತ್ತಿದ್ದ ಅವರು ರಸ್ತೆ ಬದಿಯಲ್ಲಿ ಬೈಕ್‌ ನಿಲ್ಲಿಸಿ ಗ್ರಾಹಕರಿಗೆ ಕರೆ ಮಾಡಿ ವಿಳಾಸ ಕೇಳುತ್ತಿದ್ದ ಸಂದರ್ಭ ವೇಗವಾಗಿ ಬಂದ ಕಾರು ಢಿಕ್ಕಿ ಹೊಡೆದಿತ್ತು ಎನ್ನಲಾಗಿದೆ. 

ತೀವ್ರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಫ‌ಲಕಾರಿಯಾಗಲಿಲ್ಲ. ಈ ಕುರಿತು ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Post a Comment

0 Comments